mysuru blankets
ಮೈಸೂರು: ಶ್ರಾವಣ ಮಾಸದ ಹಿನ್ನೆಲೆಯಲ್ಲಿ ವಿಪರೀತ ಚಳಿ ಇರುವ ಪರಿಣಾಮ ಚಾಮುಂಡೇಶ್ವರಿ ಬಳಗದ ಯುವಕರು ನಿರಾಶ್ರಿತರಿಗೆ ಹೊದಿಕೆ ವಿತರಿಸಿ ಮಾನವೀಯತೆ ಮೆರೆದಿದ್ದಾರೆ.
ಮೈಸೂರು ನಗರದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಕೆ.ಆರ್.ಆಸ್ಪತ್ರೆ ಸುತ್ತಮುತ್ತ ರಸ್ತೆ ಬದಿಯಲ್ಲಿ ಮಲಗಿರುವ ನಿರಾಶ್ರಿತರು ಹಾಗೂ ಬಡವರಿಗೆ ಉಚಿತವಾಗಿ ಹೊದಿಕೆ ವಿತರಿಸುವ ಮೂಲಕ ಕೆಪಿಸಿಸಿ ಸದಸ್ಯ ನಜರ್‌ಬಾದ್ ನಟರಾಜ್ ಅವರು ಸೇವಾ ಕಾರ್ಯಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ನಮ್ಮ ಮೈಸೂರಿನಲ್ಲಿ ನಿರಾಶ್ರಿತರು, ಅಶಕ್ತರಲ್ಲಿ ಸ್ವಾಭಿಮಾನಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದ ಕಾರಣ ಕಷ್ಟದಲ್ಲಿದ್ದೇವೆ ಸಹಾಯ ಮಾಡಿ ಎಂದು ಅವರು ಸಂಘ ಸಂಸ್ಥೆಗಳಿಗೆ ಅಥವಾ ಸರ್ಕಾರಕ್ಕೆ ಅರ್ಜಿ ಹಾಕಲ್ಲ. ಸರ್ಕಾರದವರೂ ಕೂಡ ಎಲ್ಲವನ್ನು ಸರಿದಾರಿಗೆ ತರೋದಕ್ಕೂ ಆಗುವುದಿಲ್ಲ. ಸಮಾಜವನ್ನು ಸರಿಪಡಿಸಲು ಸಂಘ ಸಂಸ್ಥೆಗಳ ಮತ್ತು ಸಾರ್ವಜನಿಕರ ಪಾತ್ರ ಬಹಳ ಮುಖ್ಯ. ಅಶಕ್ತರಿರುವ ಸ್ಥಳಕ್ಕೆ ಹೋಗಿ ಹೊದಿಕೆ ವಿತರಣೆ ಕಾರ್ಯಕ್ರಮ ನಡೆಯುವ ಮಾದರಿಯಲ್ಲೇ ಅವರಿಗೆ ಆರೋಗ್ಯ ತಪಾಸಣೆ ಮಾಡಿಸಲು ಶ್ರಮಿಸೋಣ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮುಖಂಡರುಗಳಾದ ರಮೇಶ್ ರಾಮಪ್ಪ, ಜಿ ರಾಘವೇಂದ್ರ, ದಿನೇಶ್, ಎಸ್.ಎನ್.ರಾಜೇಶ್, ರವಿಚಂದ್ರ, ಭೈರತಿ ಲಿಂಗರಾಜು, ಅಮಿತ್ ಹಾಗೂ ಇನ್ನಿತರರು ಹಾಜರಿದ್ದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…