ಮೈಸೂರು ನಗರ

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು 6 ವರ್ಷ 8 ತಿಂಗಳ ವಯಸ್ಸಿನ ಆಫ್ರಿಕಾ ಬೇಟೆ ಚೀತಾ ‘ಬ್ರೂಕ್‌’ ದಿಢೀರ್ ಮೆನಿಂಜಿಟಿಸ್ ರೋಗಕ್ಕೆ ತುತ್ತಾಗಿ ಶನಿವಾರ ಮುಂಜಾನೆ ಅಸು ನೀಗಿತು ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಆನ್ನೆ ವಾನ್ ಡೈಕ್ ಚೀತಾ ಕೇಂದ್ರದಿಂದ 2020ರ ಆಗಸ್ಟ್ 17 ರಂದು ಗಂಡು ಚೀತಾ ಬ್ರೂಕ್ ಅನ್ನು ಮೈಸೂರು ಮೃಗಾಲಯಕ್ಕೆ ತರಲಾಗಿತ್ತು.

ಇದನ್ನು ಓದಿಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಅನಾರೋಗ್ಯದಿಂದ ಬಳಲುತ್ತಿದ್ದ ಚೀತಾ ಬ್ರೂಕ್ ಕಳೆದ ಮೂರು ದಿನಗಳಿಂದ ಆಹಾರವನ್ನು ಸಂಪೂರ್ಣವಾಗಿ ತ್ಯಜಿಸಿತ್ತು. ಮೃಗಾಲಯದ ಪಶುವೈದ್ಯಾಧಿಕಾರಿಗಳು ಬ್ರೂಕ್‌ಗೆ ಅಗತ್ಯ ಚಿಕಿತ್ಸೆ ನೀಡುತ್ತಿದ್ದರೂ, ಚಿಕಿತ್ಸೆಗೆ ಸ್ಪಂದಿಸದೆ ಮರಣ ಹೊಂದಿತು. ಬ್ರೂಕ್ ಸಾವಿಗೆ ಮೃಗಾಲಯವು ತೀವ್ರ ವಿಷಾದ ವ್ಯಕ್ತಪಡಿಸುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 22 ಬುಧವಾರ

11 mins ago

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

12 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

12 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

12 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

12 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

13 hours ago