ನಮ್ಮ ಮೈಸೂರ ದಸರಾ 2024

ಅರ್ಜುನ ಆನೆಯ ನೆನಪಿನಾರ್ಥ ಮಾವುತರಿಗೆ ಬೆಡ್‌ಶೀಟ್ ವಿತರಣೆ‌

ಮೈಸೂರು: ಆನೆ ಕಾರ್ಯಾಚರಣೆಯಲ್ಲಿ ವೀರ ಮರಣ ಹೊಂದಿದ ಅರ್ಜುನ ಆನೆಯ ನೆನಪಿನಾರ್ಥ ಕಲಾ ಸತೀಶ್‌ ಅವರು ಮೈಸೂರು ದಸರಾ ಸಲುವಾಗಿ ಆಗಮಿಸಿರುವ 65 ಮಾವುತ ಕುಟುಂಬ ವರ್ಗದವರಿಗೆ ಜಮಖಾನ ಮತ್ತು ಬೆಡ್‌ಶೀಟ್‌ಗಳನ್ನು ವಿತರಿಸಿದರು.

ಅರ್ಜುನ ಆನೆಯು ನಾಡಹಬ್ಬ ಮೈಸೂರು ದಸರಾದಲ್ಲಿ ಚಿನ್ನದ ಅಂಬಾರಿಯನ್ನು 7 ಬಾರಿ ಹೊತ್ತು ಕಳೆದ ವರ್ಷ(2023) ಕಾಡಾನೆ ಸೆರೆ ಹಿಡಿಯುವಾಗ ಕಾರ್ಯಾಚರಣೆಯಲ್ಲಿ ವೀರ ಮರಣವನ್ನು ಹೊಂದಿತ್ತು. ಈ ವರ್ಷ ಅರ್ಜುನ ಆನೆಯ ಸ್ಮರಣಾರ್ಥ ಕಲಾ ಸತೀಶ್‌ ಅವರು ಮೈಸೂರು ದಸರಾ ಜಂಬೂ ಸವಾರಿಗಾಗಿ ಅರಮನೆಯ ಆವರಣದಲ್ಲಿ ತಂಗಿರುವ ಮಾವುತ ಕುಟುಂಬಗಳಿಗೆ ಜಮಖಾನ ಹಾಗೂ ಬೆಡ್‌ಶಿಟ್‌ಗಳನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಬಿಎಫ್‌ಒ ಪ್ರಭುಗೌಡ, ಆರ್‌ಎಫ್‌ ಸಂತೋಷ್‌ಕುಮಾರ್‌, ಆದಿತ್ಯ ಸುಬ್ರಮಣ್ಯ, ಪ್ರಶಾಂತ್‌, ಸಂತೋಷ್‌ ನವೀನ್‌, ಪ್ರಜ್ವಲ್‌, ಮಾನ್ಯ ಹಾಗೂ ಹರ್ಷ ಉಪಸ್ಥಿತರಿದ್ದರು.

andolana

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

4 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

6 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

6 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

6 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

6 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

6 hours ago