ನಮ್ಮ ಮೈಸೂರ ದಸರಾ 2024

ಪುಸ್ತಕ ಮೇಳ: ವಾಗ್ದೇವಿಯ ಭಂಡಾರ, ಸರಸ್ವತಿಯ ಮಂದಿರ: ಸಾಹಿತಿ ಹಂಪಾ ನಾಗರಾಜಯ್ಯ

ಮೈಸೂರು ದಸರಾ ಪುಸ್ತಕ ಮೇಳಕ್ಕೆ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಚಾಲನೆ

ಮೈಸೂರು:  ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಗರದ  ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನದಲ್ಲಿ ಹಮ್ಮಿಕೊಂಡಿರುವ ಪುಸ್ತಕ ಮೇಳವನ್ನು ಹಿರಿಯ ಸಾಹಿತಿ ನಾಡೋಜ ಹಂಪಾ ನಾಗರಾಜಯ್ಯ ಅವರು ಉದ್ಘಾಟಿಸಿದರು.

ಮೇಳ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಪುಸ್ತಕ ಮೇಳ ಎಂಬುದು ವಾಗ್ದೇವಿಯ ಭಂಡಾರ, ಸರಸ್ವತಿಯ ಮಂದಿರ. ಎಲ್ಲಾ ಓದುಗರಿಗೂ ಸರಸ್ವತಿಯ ಅನುಗ್ರಹ ಸುಲಭವಾಗಿ ಲಭಿಸುವುದಿಲ್ಲ. ಅದಕ್ಕೆ ಶ್ರದ್ಧೆ, ಭಕ್ತಿ ಹಾಗೂ ವಿನಯದಿಂದ ಮನಸಿಟ್ಟು ಓದಿದರೆ ಮಾತ್ರ ದೇವರಿಂದ ಆಗಲಿ ನಾವು ಮಾಡಿದ ಕೆಲಸಕ್ಕಾಗಲಿ ಪ್ರತಿಫಲ ಸಿಗುತ್ತದೆ ಎಂದು ಹೇಳಿದರು.

ಈ ಬಾರಿಯ ಪುಸ್ತಕ ಮೇಳ 10 ದಿನಗಳ ಕಾಲ ನಡೆಯಲಿದ್ದು, ದಸರಾ ನೋಡಲು ಬಂದವರು ಈ ಮೇಳವನ್ನು ಆನಂದಿಸಬೇಕು. ಒಂದೇ ಸೂರಿನಡಿ ಸದಭಿರುಚಿಯ ನಾನಾ ಪುಸ್ತಕಗಳು ಲಭ್ಯವಿದೆ ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಪುಸ್ತಕ ಪ್ರೇಮಿಗಳಿಗೆ ಸಲಹೆ ನೀಡಿದರು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಮಾತನಾಡಿ, ಪುಸ್ತಕ ಹಾಗೂ ಸಂಸ್ಕೃತಿಯ ಆರಾಧಕರಾದ ಒಬ್ಬ ಸಾಹಿತಿಯೇ ನಾಡಹಬ್ಬ ದಸರಾ ಮತ್ತು ಪುಸ್ತಕ ಮೇಳದ ಉದ್ಘಾಟನೆ ಮಾಡಿರುವುದು ಇತಿಹಾಸದಲ್ಲೇ ಮೊದಲು. ಇದು ಒಬ್ಬ ಸಾಹಿತಿ ಮತ್ತು ಉತ್ತಮ ವಾಗ್ಮಿಗೆ ದೊರೆತ ದೊಡ್ಡ ಗೌರವವಾಗಿದೆ ಎಂದು ತಿಳಿಸುತ್ತಾ ಈ ವೇಳೆ ಬಸವಣ್ಣನವರ ವಚನಗಳನ್ನು ನೆನಪಿಸಿದರು.

ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳದ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು ಮತ್ತು ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಸಾಹಿತ್ಯ ವಚನ ಚಿಂತನಾಮಾಲೆ, ವಿಶ್ವಕೋಶ, ನಿಘಂಟು ಪುಸ್ತಕಗಳು ಹೀಗೆ ಅನೇಕ ಪುಸ್ತಕಗಳು ಕಡಿಮೆ ದರದಲ್ಲಿ ಲಭ್ಯವಿದೆ. ಹಾಗಾಗಿ ಈ ಬಾರಿಯ ಪುಸ್ತಕ ಮೇಳವು ಸಾಹಿತ್ಯ ಪ್ರಿಯರಿಗೆ ಓದಲು ಅಥವಾ ಉಡುಗೊರೆ ನೀಡಲು ಸದಾವಕಾಶವಾಗಿದೆ ಎಂದರು.

ಈ ಬಾರಿಯ ಪುಸ್ತಕ ಮೇಳದಲ್ಲಿ ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರ, ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಂಗ, ವೇದ ಬುಕ್ ಹೌಸ್, ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಹಾಗೂ ಕರ್ನಾಟಕ ಜಾನಪದ ಅಕಾಡೆಮಿ, ಕರ್ನಾಟಕ ತಿಳಿ ಸಾಹಿತ್ಯ ಅಕಾಡೆಮಿ, ಸ್ವಪ್ನ ಬುಕ್ ಹೌಸ್ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ಕದಂಬ ಪ್ರಕಾಶನ ಭಾರತೀ ಪ್ರಕಾಶನ, ಕೇಂದ್ರ ಸಾಹಿತ್ಯ ಅಕಾಡೆಮಿ ಬೆಂಗಳೂರು,ನವ ಕರ್ನಾಟಕ ಪಬ್ಲಿಕೇಶನ್, ಸಾಹಿತ್ಯ ಸ್ಥಂಬ, ಶ್ರೀ ಕನಕ ಪುಸ್ತಕ ಬಂಡಾರ ಬೆಂಗಳೂರು ಸೇರಿದಂತೆ ಹಲವು ಪ್ರಾಧಿಕಾರದ ಮಳಿಗೆಗಳನ್ನು ತೆರೆಯಲಾಗಿದ್ದು, ಇದು ಕನ್ನಡ ಪುಸ್ತಕಾಭಿಮಾನಿಗಳನ್ನು ಆಕರ್ಷಿಸಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿಂದುಳಿದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ಎಸ್ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಧರಣಿ ದೇವಿ ಮಾಲಗತ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗೀಯ ಜಂಟಿ ನಿರ್ದೇಶಕರಾದ ವಿ ಎನ್ ಮಲ್ಲಿಕಾರ್ಜುನ ಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಎಂ.ಡಿ ಸುದರ್ಶನ್, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

8 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

9 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

10 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

12 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

12 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

13 hours ago