ನಮ್ಮ ಮೈಸೂರ ದಸರಾ 2024

ಚಲನ ಚಿತ್ರೋತ್ಸವ ಕಿರು ಚಿತ್ರ ಸ್ಪರ್ಧೆ : ಸಚಿವರಿಂದ ಬಹುಮಾನ ವಿತರಣೆ

ಮೈಸೂರು: ದಸರಾ ಚಲನ ಚಿತ್ರೋತ್ಸವ ಸಮಿತಿಯ ವತಿಯಿಂದ ಏರ್ಪಡಿಸಿದ್ದ ಕಿರು ಚಿತ್ರ ಸ್ಪರ್ಧೆಯ ಬಹುಮಾನ ವಿತರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಹೆಚ್ ಸಿ ಮಹದೇವಪ್ಪ ವಿತರಣೆ ಮಾಡಿದರು.

ಮಂಗಳವಾರ ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದಲ್ಲಿ ಹಮ್ಮಿಕೊಂಡಿದ್ದ ದಸರಾ ಚಲನ ಚಿತ್ರೋತ್ಸವ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ ಕಿರು ಚಿತ್ರ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಬಹುಮಾನ ವಿತರಿಸಿದರು.

ಬಳಿಕ, ದಸರಾ ಚಲನಚಿತ್ರೋತ್ಸವ ಸಮಿತಿಯ ಉಪ ವಿಶೇಷಾಧಿಕಾರಿಗಳಾದ ಡಾ ಬಸವರಾಜ್ ಕೆ.ಎನ್. ಮಾತನಾಡಿ, ಕಿರು ಚಿತ್ರ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿತ್ತು, 73 ಚಿತ್ರಗಳು ಸ್ಪರ್ಧೆಯಲ್ಲಿ ಭಾಗವಿಸಿದ್ದವು. 4 ಜನರ ತೀರ್ಪುಗಾರರ ತಂಡ ಕಿರು ಚಿತ್ರಗಳನ್ನು ವೀಕ್ಷಿಸಿ ಆಯ್ಕೆ ಮಾಡಿತ್ತು. ಈ ಕಿರುಚಿತ್ರಗಳಿಗೆ ಬಹುಮಾನ ವಿತರಣೆ ಮಾಡಲಾಗುತ್ತಿದೆ ಎಂದರು.

ಕಿರುಚಿತ್ರ ಸ್ಪರ್ಧೆ ವಿಜೇತರು

ದಿಲೀಪ್‌ ಕುಮಾರ್‌ ನಿರ್ದೇಶನದ ಪೋಲಾರ್‌(ಪ್ರಥಮ), ಅಭಿಜಿತ್‌ ಪುರೋಹಿತ್‌ ನಿರ್ದೇಶನಕ ಲಕ್ಷ್ಮಿ(ದ್ವಿತೀಯ), ಎಸ್‌.ಪಿ. ಪವನ್‌ ನಿರ್ದೇಶಕನದ ಅನ್ವಾನ್ಟೆಡ್‌ ಕಿಡ್‌(ತೃತೀಯ) ಸ್ಥಾನ ಪಡೆದರೆ. ಸ್ಟ್ಯಾನಿ ಜಾಯ್‌ಸನ್‌ ನಿರ್ದೇಶನದ ತ್ರಿಕಾಲಮ್‌ ಚಿತ್ರಕ್ಕೆ ಉತ್ತಮ ಸಂಕಲನಕಾರ ಹಾಗೂ ಕೃತಾರ್ತ್‌ ಮಂಡೆಕುಟ್ಟಂಡ ನಿರ್ದೇಶನದ ವರ್ತಕಾಲಿ ಚಿತ್ರಕ್ಕೆ ಉತ್ತಮ ಛಾಯಾಗ್ರಾಹಕ ಪ್ರಶಸ್ತಿ ಲಭಿಸಿತು.

ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ, ಚಲನ ಚಿತ್ರ ನಟರಾದ ಮಂಡ್ಯ ರಮೇಶ್, ವಿಧಾನ ಪರಿಷತ್ ಸದಸ್ಯರಾದ ಡಿ ತಿಮ್ಮಯ್ಯ,ದಸರಾ ಚಲನ ಚಿತ್ರೋತ್ಸವ ಸಮಿತಿಯ ಉಪಾಧ್ಯಕ್ಷರುಗಳಾದ ಕಾಶಿನಾಥ್, ಬೃಂದ ಕೃಷ್ಣೇಗೌಡ, ರಮೇಶ್, ಸಯ್ಯದ್ ಅಬ್ರಹಾಂ, ತೀರ್ಪುಗಾರರಾದ ಪ್ರೊ ಸ್ವಪ್ನಾ, ಸಮಿತಿಯ ಕಾರ್ಯಾಧ್ಯಕ್ಷ ರಂಗೇಗೌಡ, ಸಮಿತಿ ಕಾರ್ಯದರ್ಶಿ ಹರೀಶ್ ಟಿ.ಕೆ ಹಾಗೂ ಸಮಿತಿಯ ಸದಸ್ಯರುಗಳು  ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

47 mins ago

ಅಜ್ಜೀಪುರ ಸಫಾರಿ ಕೇಂದ್ರದಲ್ಲಿ ಬಿಳಿ ಬಣ್ಣದ ಜಿಂಕೆ ದರ್ಶನ

ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.…

2 hours ago

ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು : ಸಚಿವ ಖಂಡ್ರೆ ಆಕ್ರೋಶ

ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…

2 hours ago

ಸಿಎಂ ಬದಲಾವಣೆ ಸಮಯ ಬಂದಿದೆ: ವಿಜಯೇಂದ್ರ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…

4 hours ago

ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…

4 hours ago

ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವು

ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…

5 hours ago