ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ನೆರವೇರಿದ್ದು, ಇದಕ್ಕಾಗಿಯೇ ನಾಡದೇವತೆ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಕೆಂಪು ಸೀರೆಯ ಉಡಿಸಿ ಅಲಂಕಾರ ಮಾಡಲಾಗಿತ್ತು.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದ್ದು, ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾಗೆ ಅದ್ಧೂರಿ ಚಾಲನೆ ನೀಡಿದರು.
ಈ ಹಿನ್ನೆಲೆಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಕೆಂಪು ಸೀರೆ ಉಡಿಸಿ ಅಲಂಕಾರ ಮಾಡಲಾಗಿತ್ತು.
ಬಳಿಕ ಸಿಎಂ ಸಿದ್ದರಾಮಯ್ಯ, ಸಾಹಿತಿ ಹಂಪ ನಾಗರಾಜಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ಹಲವು ನಾಯಕರು ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾಗೆ ಚಾಲನೆ ನೀಡಿದರು.