Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಮೈಸೂರು ಅರಮನೆ ತಲುಪಿದ ಚಾಮುಂಡೇಶ್ವರಿ ಉತ್ಸವ ಮೂರ್ತಿ

ಮೈಸೂರು: ಮಲ್ಲಿಗೆ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದ್ದು, ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗುವ ಚಾಮುಂಡೇಶ್ವರಿ ಉತ್ಸವ ಮೂರ್ತಿ ಅರಮನೆಗೆ ಬಂದು ತಲುಪಿದೆ.

ಚಾಮುಂಡಿಬೆಟ್ಟದಿಂದ ಬೆಳ್ಳಿ ಪಲ್ಲಕ್ಕಿ ಉತ್ಸವದೊಂದಿಗೆ ಹಲವು ಕಲಾತಂಡಗಳು ಹಾಗೂ ನಾದಸ್ವರದೊಂದಿಗೆ ಉತ್ಸವ ಮೂರ್ತಿಯನ್ನು ತರಲಾಯಿತು.

ಬೆಳ್ಳಿ ರಥದ ಮೂಲಕ ಅರಮನೆಯನ್ನು ಪ್ರವೇಶ ಮಾಡಿದ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಜಿಲ್ಲಾಡಳಿತವು ರಾಜವಂಶಸ್ಥರಿಗೆ ಹಸ್ತಾಂತರ ಮಾಡಿತು.

ಇನ್ನು ಇಂದು ದಸರೆಗೆ ಕೊನೆಯ ದಿನ ಆಗಿರುವುದರಿಂದ ಭಾರೀ ಜನಸ್ತೊಮವೇ ಸೇರಿದ್ದು ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಈಗಾಗಲೇ ಸಾವಿರಾರು ಜನರು ಸೇರಿದ್ದಾರೆ.

ರಸ್ತೆಯ ಇಕ್ಕೆಲಗಳಲ್ಲಿ ಭಾರೀ ಜನಸ್ತೋಮ ಏರ್ಪಟ್ಟಿದ್ದು, ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

 

 

Tags: