Mysore
28
scattered clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಯೋಗ ಚಾರಣ, ದುರ್ಗಾ ನಮಸ್ಕಾರಕ್ಕೆ ಸಾಕ್ಷಿಯಾದ ಚಾಮುಂಡಿ ಬೆಟ್ಟ

ಮೈಸೂರು: ನಾಡಹಬ್ಬ ಮೈಸೂರು ದಸರಾದ 7ನೇ ದಿನವಾದ ಬುಧವಾರ ಯೋಗ ದಸರಾ ಉಪ ಸಮಿತಿ ವತಿಯಿಂದ ಚಾಮುಂಡಿ ಬೆಟ್ಟದ ತಪ್ಪಲು ಮತ್ತು ದೇವಸ್ಥಾನದ ಆವರಣದಲ್ಲಿ ‘ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರ ‘ ಕಾರ್ಯಕ್ರಮವನ್ನು ನಡೆಸಲಾಯಿತು.

ಯೋಗ ಅಧಿಕಾರೇತರ ಉಪಸಮಿತಿಯ ಅಧ್ಯಕ್ಷರಾದ ಎಂ.ಮಹೇಶ್ ಅವರು ಸಮಾರಂಭವನ್ನು ಉದ್ಘಾಟನೆ ಮಾಡಿದರು. ಯೋಗ ಸರಪಳಿಯಲ್ಲಿ ಯೋಗಪಟುಗಳು, ವಿದ್ಯಾರ್ಥಿಗಳು ಹಾಗೂ ಯುವಕರು, ಹಿರಿಯ, ಸಾರ್ವಜನಿಕರು ಸೇರಿದಂತೆ ಮೈಸೂರಿನ ವಿವಿಧೆಡೆಯಿಂದ ಆಗಮಿಸಿದ್ದ ಸುಮಾರು 250 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಬೆಳಗ್ಗೆ 7 ಗಂಟೆಗೆ ಚಾಮುಂಡಿ ಬೆಟ್ಟದ ಆವರಣದಲ್ಲಿ ನೆರೆದಿದ್ದ ಜನರ ದೃಶ್ಯವು ಮೈಸೂರಿನ ಸೊಬಗನ್ನು ಹೆಚ್ಚಿಸಿತು.

ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರ ಸೇರಿ ವಿವಿಧ ಭಂಗಿಗಳ ಪ್ರದರ್ಶನ
ಯೋಗಪಟುಗಳು ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರ, ಸೂರ್ಯ ನಮಸ್ಕಾರ, ವಜ್ರಾಸನ, ಸ್ವಾನಾಸನ, ತ್ರಿಕೋನಾಸನ, ಶವಾಸನ, ಸಿದ್ಧಾಸನ, ಅರ್ಧಚಕ್ರಾಸನ ಸೇರಿದಂತೆ ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು. ಮತ್ತು ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮವು ಯೋಗ ದಸರಾಗೆ ಮತ್ತಷ್ಟು ಮೆರುಗು ತಂದಿತು.

ಕಾರ್ಯಕ್ರಮದಲ್ಲಿ ಜೆ.ಎಸ್.ಎಸ್.ಸಮೂಹದ ಮುಖ್ಯಸ್ಥರಾದ ಶ್ರೀಹರಿ, ಯೋಗ ದಸರಾ ಉಪಸಮಿತಿಯ ವಿಶೇಷಾಧಿಕಾರಿಗಳಾದ ಕೆ.ರಮ್ಯ, ಕಾರ್ಯಾಧ್ಯಕ್ಷರಾದ ಅನಂತರಾಜು, ಕಾರ್ಯದರ್ಶಿ ಪುಷ್ಪ , ಚಾಮುಂಡಿ ಬೆಟ್ಟದ ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾಗಮ್ಮ ಮತ್ತು ಉಪಾಧ್ಯಕ್ಷರಾದ ರವಿಕುಮಾರ್ ವೈ ಎಸ್.ಸೇರಿದಂತೆ ಇನ್ನಿತರು  ಉಪಸ್ಥಿತರಿದ್ದರು.

Tags: