ನಮ್ಮ ಮೈಸೂರ ದಸರಾ 2024

ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಸ್ಪರ್ಧೆಗೆ ಒತ್ತಡ ಇರುವುದು ನಿಜ ಎಂದ ಎಚ್‌ಡಿಕೆ

ತೋಟದ ಮನೆಯಲ್ಲಿ ಚನ್ನಪಟ್ಟಣ ಕಾರ್ಯಕರ್ತರು, ಮುಖಂಡರ ಸಭೆ ನಡೆಸಿದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ

ಚನ್ನಪಟ್ಟಣ ಉಪ ಚುನಾವಣೆಗೆ ಜೆಡಿಎಸ್ ತಯಾರಿ, ಅಭ್ಯರ್ಥಿ ಆಯ್ಕೆ ಬಗ್ಗೆ ಸಮಾಲೋಚನೆ

ಮಿತ್ರಪಕ್ಷ ಬಿಜೆಪಿ ಜತೆ ಚರ್ಚಿಸಿ ಇನ್ನೊಂದು ವಾರದಲ್ಲಿ ಟಿಕೆಟ್ ಫೈನಲ್ ಮಾಡುತ್ತೇವೆ ಎಂದ ಎಚ್‌ಡಿಕೆ

ರಾಮನಗರ: ಮುಂಬರುವ ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವರ ಎಚ್ .ಡಿ.ಕುಮಾರಸ್ವಾಮಿ ಅವರು ಬಿಡದಿ ಸಮೀಪದ ಕೇತಿಗಾನಹಳ್ಳಿಯ ತಮ್ಮ ತೋಟದಲ್ಲಿ ಕ್ಷೇತ್ರದ ಕಾರ್ಯಕರ್ತರು, ಮುಖಂಡರ ಸಭೆ ಕರೆದು ಸಮಾಲೋಚನೆ ನಡೆಸಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಯಮುತ್ತು ಸೇರಿದಂತೆ ಚನ್ನಪಟ್ಟಣ ಕ್ಷೇತ್ರದ ಎಲ್ಲಾ ಪ್ರಮುಖ ಮುಖಂಡರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಈಗಾಗಲೇ 5 ಜಿಲ್ಲಾ ಪಂಚಾಯತಿ, ಕ್ಷೇತ್ರ ಹಾಗೂ ಪಟ್ಟಣ ಭಾಗದಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದೇವೆ. ಈ ಸಭೆಯಲ್ಲಿ ಹಳ್ಳಿ, ಹೋಬಳಿ, ಪಂಚಾಯಿತಿ ಮಟ್ಟದ ಮುಖಂಡರು ಬಂದಿದ್ದರು. ಚುನಾವಣೆಗೆ ಯಾವ ರೀತಿ ತಯಾರಿ ಮಾಡಿಕೊಳ್ಳಬೇಕು. ಅಭ್ಯರ್ಥಿ ಯಾರಾಗಬೇಕು ಎನ್ನುವುವ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ. ಜೆಡಿಎಸ್- ಬಿಜೆಪಿ ಎರಡು ಪಕ್ಷಗಳು ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ಮಿತ್ರಪಕ್ಷ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಕೆಲಸ ಮಾಡಬೇಕು ಎಂದು ಮುಖಂಡರಿಗೆ ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದರು.

ನವೆಂಬರ್ ಒಳಗೆ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಬೇಕಿದೆ. ಅದೇ ಸಮಯದಲ್ಲಿ ಚನ್ನಪಟ್ಟಣ ಉಪ ಚುನಾವಣೆ ನಡೆಯಬಹುದು. ಇನ್ನು ಒಂದು ವಾರದಲ್ಲಿ ಚುನಾವಣೆ ಘೋಷಣೆಯಾಗಬಹುದು. ಅಂತಿಮವಾಗಿ ದೆಹಲಿ ಮಟ್ಟದಲ್ಲಿ ಬಿಜೆಪಿಯ ಹೈಕಮಾಂಡ್ ಹಾಗೂ ನಾವು ಕೂತು ಚರ್ಚೆ ಮಾಡುತ್ತೇವೆ ಎಂದು ಕೇಂದ್ರ ಸಚಿವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಕಳೆದ ಎರಡು ಬಾರಿ ಜೆಡಿಎಸ್ ನಿಂದ ಗೆದ್ದಿದ್ದೇವೆ. ಈ ಹಿಂದಿನಿಂದಲೂ ಇದು ಜೆಡಿಎಸ್ ಭದ್ರಕೋಟೆ. ನಮ್ಮಲ್ಲಿನ ಸಂಘಟನೆಯಲ್ಲಿ ಕೆಲವೊಂದು ಲೋಪದೋಷಗಳಿಂದ ಹಿಂದೆ ಬಿದ್ದಿದ್ದೆವು.
2013ರಲ್ಲೂ ನಮಗೆ ಹೆಚ್ಚಿನ ಮತಗಳು ಬಂದಿದ್ದವು. ಚನ್ನಪಟ್ಟಣದಲ್ಲಿ ಕಾರ್ಯಕರ್ತರೇ ನನ್ನ ಚುನಾವಣೆ ನಡೆಸಿದ್ದಾರೆ. ನಮ್ಮ ಸಂಘಟನೆ ದೃಷ್ಟಿಯಿಂದ ಕೂತು ಚರ್ಚೆ ಮಾಡಿದ್ದೇವೆ. ಯಾವುದೇ ಸಮಸ್ಯೆ ಆಗದ ರೀತಿ ಚುನಾವಣೆ ನಡೆಸುತ್ತೇವೆ ಎಂದು ಸಚಿವರು ಹೇಳಿದರು.

ನಿಖಿಲ್ ಅಭ್ಯರ್ಥಿ ಆಗಬೇಕು ಎಂಬ ಒತ್ತಡ ಇದೆ

ನಿಖಿಲ್ ಕುಮಾರಸ್ವಾಮಿ ಅವರು ಉಪ ಚುನಾವಣೆಯ ಅಭ್ಯರ್ಥಿ ಆಗಬೇಕು ಎಂಬ ಬಗ್ಗೆ ಕಾರ್ಯಕರ್ತರಿಂದ ಒತ್ತಡ ಇದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು; ಒತ್ತಡ, ಒತ್ತಾಯ ಇರುವುದು ನಿಜ. ನಿಖಿಲ್ ಕುಮಾರಸ್ವಾಮಿ ನಿಲ್ಲಬೇಕು ಅಂತ 95% ನಾಯಕರು, ಮುಖಂಡರ ಅಭಿಪ್ರಾಯವಿದೆ. ಆದರೆ‌, ನಾವು ಈಗ ಇರುವ ಸನ್ನಿವೇಶ ನೋಡಿಕೊಂಡು ನಿರ್ಧಾರ ಕೈಗೊಳ್ಳಬೇಕು. ಏನೇನು ಬೆಳವಣಿಗೆಗಳು ಇವೆ ಅಂತ ನೋಡಬೇಕು. ನಿಖಿಲ್ ಮಂಡ್ಯದಲ್ಲಿ ‌ನಿಲ್ಲಿಸಿದಾಗ ಎಲ್ಲಾ ‌ಪಕ್ಷಗಳು ಒಂದಾಗಿ ಸೋಲಿಸಿದರು. ಸಂಘಟಿತ ಷಡ್ಯಂತ್ರ ಮಾಡಿ ಸೋಲಿಸಲಾಯಿತು. ನಾನು ಈಗ ಎನ್ ಡಿಎ ಭಾಗ. ಎನ್ ಡಿಎ ಅಭ್ಯರ್ಥಿ ಗೆಲ್ಲಬೇಕು. ಯಾರೇ ನಿಂತು ಗೆದ್ದರೂ ಅದು ಎನ್ ಡಿಎ ಗೆಲುವು, ಆ ಮೂಲಕ ಕಾಂಗ್ರೆಸ್ ವಿರೋಧಿ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೋರಾಟಕ್ಕೆ ನಾವೂ ಕೈಜೋಡಿಸಿದ ಹಾಗಾಗುತ್ತದೆ ಎಂದು ಅವರು ಹೇಳಿದರು.

ಈ ಹಿನ್ನಲೆಯಲ್ಲಿ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರು, ಕಾರ್ಯಕರ್ತರು ಎಲ್ಲರು ಸೇರಿ ಎರಡು ಪಕ್ಷದ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿ ಅಂತಿಮ ಮಾಡುತ್ತೇವೆ ಎಂದು ಅವರು ಹೇಳಿದರು.

ಇನ್ನೊಂದು ವಾರದಲ್ಲಿ ಟಿಕೆಟ್ ಫೈನಲ್ ಆಗುತ್ತದೆ. ಚುನಾವಣೆ ದಿನಾಂಕ 4-5 ದಿನಗಳಲ್ಲಿ ಯಾವಾಗ ಬೇಕಾದರೂ ಘೋಷಣೆ ಆಗಬಹುದು. ಕೂಡಲೇ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರ ಜತೆ ಚರ್ಚೆ ಮಾಡಿ ಅಭ್ಯರ್ಥಿ ಫೈನಲ್ ಮಾಡುತ್ತೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಪದೇ ಪದೆ ಭೇಟಿಯಿಂದ ಫಲ ಸಿಗಲ್ಲ:

ಚನ್ನಪಟ್ಟಣಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪದೇ ಪದೆ ಭೇಟಿ ನೀಡುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಅವರು ಎಷ್ಟು ಸಲ ಭೇಟಿ ಕೊಟ್ಟರೂ ಉಪಯೋಗ ಇಲ್ಲ. ಅವರು ಈ ಕ್ಷೇತ್ರಕ್ಕೆ ಕೊಟ್ಟ ಕಾಣಿಕೆ ಏನೆಂದು ಜನರಿಗೆ ಗೊತ್ತಿದೆ. ಚುನಾವಣೆ ಬಂದಿದೆ, ಅದಕ್ಕೆ ಪದೇ ಪದೆ ಬರುತ್ತಿದ್ದಾರೆ ಅಷ್ಟೇ. ಚುನಾವಣೆ ಮುಗಿದ ಮೇಲೆ ಈ ಕಡೆ ತಲೆ ಹಾಕುವುದಿಲ್ಲ ಅವರು ಎಂದು ಸಚಿವರು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

6 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

6 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

8 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

8 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

8 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

16 hours ago