ನಮ್ಮ ಮೈಸೂರ ದಸರಾ 2024

ʼಚಿಣ್ಣರ ಪ್ರತಿಭೆಗೆʼ ಮಕ್ಕಳ ದಸರಾ ವೇದಿಕೆ: ಸಚಿವ ಮಹದೇವಪ್ಪ ಅಭಿಮತ

ಮೈಸೂರು: ಮಕ್ಕಳು ತಮ್ಮಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ದಸರಾ ಮಹೋತ್ಸವದಲ್ಲಿ ಆಯೋಜಿಸಿರುವ ಮಕ್ಕಳ ದಸರಾ ಕಾರ್ಯಕ್ರಮವು ಉತ್ತಮ ವೇದಿಕೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ   ಹೇಳಿದರು.

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಶೈಕ್ಷಣಿಕ ವಸ್ತು ಪ್ರದರ್ಶನದಲ್ಲಿ ಸೋಮವಾರ ಭಾಗವಹಿಸಿ  ಅವರು ಮಾತನಾಡಿದರು.

ಮಕ್ಕಳ ದಸರಾವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿದೆ. ಮಕ್ಕಳು ಧರ್ಮ, ಜಾತಿ ಮೀರಿದ ನಿರ್ಮಲ ಮನಸ್ಸುಳ್ಳವರು. ಅವರಲ್ಲಿ ಸಾಂಸ್ಕೃತಿಕ ಅಭಿರುಚಿಯನ್ನು ಬೆಳೆಸಲು ಪೋಷಕರು ನೆರವಾಗಬೇಕು. ಶಿಕ್ಷಕರು ಕೂಡ ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಅವರು ಪ್ರಬುದ್ಧ ನಾಗರಿಕರಾಗಿ ಜೀವಿಸಲು ಅತ್ಯುತ್ತಮ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.

ಮಕ್ಕಳನ್ನು ಅತ್ಯಂತ ಎಚ್ಚರಿಕೆಯಿಂದ ಮುತುವರ್ಜಿವಹಿಸಿ ಬಾಲ್ಯದಲ್ಲಿ ಗುಣಾತ್ಮಕ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ನಡೆವಳಿಕೆಗಳನ್ನು ಕಲಿಸಬೇಕು. ನಮ್ಮ ದೇಶದ ಸಂವಿಧಾನದ ಆಶಯದಂತೆ ಮಕ್ಕಳು ಉತ್ತಮ ಪ್ರಜೆಗಳಾಗಬೇಕು ಎಂದು ಆಶಿಸಿದರು.

ಬಾಲಕ ಅಗಸ್ತ್ಯ ಮಾತನಾಡಿ, ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಗುರುತಿಸಲು ಉತ್ತಮ ವೇದಿಕೆ ಇದಾಗಿದ್ದು, ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳು ಮಕ್ಕಳಿಗೆ ಅಗತ್ಯವಾಗಿದೆ. ಮಕ್ಕಳು ಕೂಡ ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಎಂದು ನುಡಿದರು.

ಇದೇ ವೇಳೆ ಕಲಾಮಂದಿರ ಆವರಣದಲ್ಲಿ ತೆರೆಯಲಾಗಿರುವ ಶೈಕ್ಷಣಿಕ ವಸ್ತುಪ್ರದರ್ಶನದ ಮಳಿಗೆಗಳನ್ನು ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಆಡಳಿತಾಧಿಕಾರಿ ಮಂಜುಬುದ್ದಿ, ವಿಭಾಗಧಿಕಾರಿ ರಮೇಶ್, ಡಿಡಿಪಿಐ ಜವರೇಗೌಡ, ಶಿಕ್ಷಣಾಧಿಕಾರಿ ಶೋಭಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

8 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

9 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

11 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

11 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

13 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

13 hours ago