Mysore
28
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ದಸರಾ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರಿಂದು ದಸರಾ ಫಲಪುಷ್ಪ ಪ್ರದರ್ಶನ ಉದ್ಘಾಟನೆ ನೆರವೇರಿಸಿದರು.

ಮೈಸೂರಿನ ಕುಪ್ಪಣ್ಣ ಪಾರ್ಕ್‌ನಲ್ಲಿ ಆಯೋಜನೆ ಮಾಡಿರುವ ದಸರಾ ಫಲಪುಷ್ಪ ಪ್ರದರ್ಶನದಲ್ಲಿ ವಿಭಿನ್ನ ಥೀಮ್‌ನೊಂದಿಗೆ ಹೂಗಳಿಂದ ಅಲಂಕೃತಗೊಳಿಸಿ ಜನರನ್ನು ಮನಸೂರೆಗೊಳಿಸುವಂತೆ ಮಾಡಲಾಗಿದೆ.

ಈ ವರ್ಷ ಸುಮಾರು 80 ರಿಂದ 85 ಸಾವಿರ ಹೂವಿನ ಗಿಡಗಳನ್ನು ಪ್ರದರ್ಶಿಸಲಾಗಿದ್ದು, ಮೈಸೂರಿನಲ್ಲೇ 50 ರಿಂದ 60 ಸಾವಿರ ಹೂವಿನ ಕುಂಡಗಳಲ್ಲಿ ಸಸಿಗಳನ್ನು ಬೆಳೆಸಲಾಗಿದೆ.

ಇಂದು ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.

 

Tags: