Mysore
20
light rain

Social Media

ಸೋಮವಾರ, 14 ಅಕ್ಟೋಬರ್ 2024
Light
Dark

ದಸರಾ ಉದ್ಘಾಟನೆಗೆ ಕ್ಷಣಗಣನೆ: ಅರಮನೆ, ಚಾ.ಬೆಟ್ಟದಲ್ಲಿ ಸಕಲ ಸಿದ್ದತೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಚಾಮುಂಡಿ ಬೆಟ್ಟದಲ್ಲಿ ನಾಳೆ(ಅ.3) ಉದ್ಘಾಟನೆ ಸಮಾರಂಭ ನಡೆಯಲಿದ್ದು, ಸಕಲ ಸಿದ್ದತೆ ನಡೆದಿದೆ.

ಜಿಲ್ಲಾಧಿಕಾರಿ ಹಾಗೂ ದಸರಾ ವಿಶೇಷ ಅಧಿಕಾರಿ ಲಕ್ಷ್ಮೀ ಕಾಂತರೆಡ್ಡಿ ಸಿದ್ದತಾ ಕಾರ್ಯಗಳನ್ನು ಪರಿಶೀಲನೆ ಮಾಡಿದ್ದು, ಸಕಲ ರೀತಿಯಲ್ಲೂ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ.

ಅ.3ರ ಗುರುವಾರ(ನಾಳೆ) ಬೆಳಿಗ್ಗೆ 9:15ರಿಂದ 9:40ರೊಳಗಿನ ಶುಭ ವೃಶ್ಚಿಕ ಲಗ್ನದಲ್ಲಿ ನಾಡಿನ ಹಿರಿಯ ಸಾಹಿತಿ ಡಾ.ಹಂಪ ನಾಗರಾಜಯ್ಯ ಅವರಿಂದ ದಸರಾ ಮಹೋತ್ಸವ ಉದ್ಘಾಟನೆಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ ಸೇರಿದಂತೆ ಸಚಿವ ಸಂಪುಟ ಸಹದ್ಯೋಗಿ ಹಾಗೂ ಶಾಸಕರು ಭಾಗಿಯಾಗಲಿದ್ದಾರೆ.

ದಸರಾ ಮಹೋತ್ಸವ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ಹತ್ತು ದಿನಗಳ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿದೆ. ಇತ್ತ ಅರಮನೆ ಆವರಣದಲ್ಲೂ ದಿನದಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳ ಜರುಗಲಿವೆ.

ಅರಮನೆ ಮುಂಭಾಗ ನಡೆಯಲಿರುವ ಕಾರ್ಯಕ್ರಮಗಳಿಗೆ ಆಕರ್ಷಕ ವೇದಿಕೆ ನಿರ್ಮಾಣ ಮಾಡಲಾಗಿದೆ. ಸಾರ್ವಜನಿಕರು ಕಾರ್ಯಕ್ರಮ ವೀಕ್ಷಿಸಲು ಅನುಕೂಲವಾಗುವಂತೆ ಆಸನಗಳನ್ನು ಇಡಲಾಗಿದೆ. ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೂ ಅಧಿಕಾರಿಗಳ ವರ್ಗ ಈಗಿನಿಂದಲೇ ಸಿದ್ದತೆ ಆರಂಭಿಸಿದೆ.

ಜತೆಗೆ, ಅರಮನೆಯಲ್ಲಿ ರಾಜಮನೆತನದ ಖಾಸಗಿ ದರ್ಬಾರ್‌ ನಡೆಯುವ ಹಿನ್ನೆಲೆ ರಾಜ ಪರಿವಾರದಲ್ಲಿ ಸಂಭ್ರಮ ಮನೆ ಮಾಡಿದೆ. ಅರಮನೆಯ ದರ್ಬಾರ್‌ ಹಾಲ್‌ನಲ್ಲಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಖಾಸಗಿ ದರ್ಬಾರ್‌ ನಡೆಸಲಿದ್ದಾರೆ.

Tags: