ಮೈಸೂರು: ವಿಶ್ವವಿಖ್ಯಾತ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಜಂಬೂಸವಾರಿ ಮೆರವಣಿಗೆಯಲ್ಲಿ ಎರಡು ಹಂತದ ಭದ್ರತೆ ಕೈಗೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸರ್ಪಗಾವಲು ಇರಲಿದೆ.
ಜಂಬೂಸವಾರಿ ನೋಡಲು ಈಗಾಗಲೇ ಮೈಸೂರಿಗೆ ರಾಜ್ಯದ ವಿವಿಧೆಡೆಗಳಿಂದ ಲಕ್ಷಾಂತರ ಜನರು ಆಗಮಿಸಿದ್ದು, ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಈಗಾಗಲೇ ಜನ ಒಬ್ಬೊಬ್ಬರಂತೆ ಜಮಾಯಿಸುತ್ತಿದ್ದಾರೆ.
ಇನ್ನು ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಿದ್ದು, ಪ್ರವಾಸಿಗರಿಗೆ ರಕ್ಷಣೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಒಟ್ಟಾರೆಯಾಗಿ ಜಂಬೂಸವಾರಿ ಮೆರವಣಿಗೆ ಮುಗಿಯುವವರೆಗೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ನಗರದಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ.