Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಇಮಾಮ್ ಶಾ ವಲೀ ದರ್ಗಾಕ್ಕೆ ಭೇಟಿ ನೀಡಿದ ದಸರಾ ಗಜಪಡೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ನಾಳೆ ವಿಜೃಂಭಣೆಯಿಂದ ನಡೆಯಲಿದೆ.

ಈ ಹಿನ್ನೆಲೆಯಲ್ಲಿಂದು ಮೈಸೂರು ನಗರದ ಚಾಮರಾಜ ಮೊಹಲ್ಲಾದಲ್ಲಿರುವ ಹಜರತ್‌ ಇಮಾಮ್‌ ಶಾ ವಲೀ ದರ್ಗಾಕ್ಕೆ ದಸರಾ ಆನೆಗಳು ಬಂದು ಸಲಾಂ ಮಾಡಿದವು.

ಸೂಫಿ ಸಂತ ಇಮಾಮ್‌ ಶಾ ವಲೀ ಅವರಿಗೆ ಹಾಗೂ ಚಾಮುಂಡೇಶ್ವರಿ ದೇವಿಗೆ ಜನತೆ ಜಯಕಾರ ಹಾಕಿದರು.

ಕಳೆದ 83 ವರ್ಷಗಳಿಂದಲೂ ವಿಜಯದಶಮಿಯ ಮುನ್ನಾ ದಿನ ಆನೆಗಳು ಇಲ್ಲಿಗೆ ಬರುತ್ತವೆ.

ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಅವಧಿಯಲ್ಲಿ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಯೊಂದಕ್ಕೆ ಆರೋಗ್ಯದ ಸಮಸ್ಯೆ ಕಾಣಿಸಿಕೊಂಡಿತ್ತು.

ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ, ಆಶೀರ್ವಾದ ಪಡೆದ ನಂತರ ಆನೆಯ ಆರೋಗ್ಯ ಸುಧಾರಿಸಿತು. ಅಂದಿನಿಂದ ಇಂದಿನವರೆಗೂ ದಸರಾ ಆನೆಗಳು ಪ್ರತಿ ದಸರಾದಲ್ಲೂ ದರ್ಗಾಗೆ ಭೇಟಿ ನೀಡುವುದು ವಾಡಿಕೆಯಾಗಿದೆ.

ಈ ಹಿನ್ನೆಲೆಯಲ್ಲಿ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಆನೆಗಳನ್ನು ದರ್ಗಾಗೆ ಕರೆತಂದು, ಧೂಪಾರತಿ ಮಾಡಿದ ನಂತರ ವಿಭೂತಿಯನ್ನು ಹಣೆಗೆ ಹಚ್ಚಲಾಯಿತು. ದರ್ಗಾದ ಚಾದರ ಮೇಲಿಟ್ಟಿದ್ದ ನವಿಲುಗರಿಯಿಂದ ಆಶೀರ್ವಾದವನ್ನು ದರ್ಗಾದ ಮುಖ್ಯಸ್ಥ ಮೊಹಮ್ಮದ್‌ ನಖೀಬುಲ್ಲಾ ಷಾ ಖಾದ್ರಿ ಮಾಡಿದರು. ಬಳಿಕ ಎಲ್ಲಾ ಆನೆಗಳು ಸೊಂಡಿಲೆತ್ತಿ ದರ್ಗಾಗೆ ನಮಸ್ಕರಿಸಿದವು

 

Tags: