ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕಾಗಿ ನಾಡಿಗೆ ಆಗಮಿಸಿ ಕಳೆದ ಎರಡು ತಿಂಗಳಿನಿಂದ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಜಂಬೂಸವಾರಿಯನ್ನು ಯಶಸ್ವಿಗೊಳಿಸಿ ಇಂದು ಕಾಡಿನತ್ತ ಪಯಣ ಬೆಳೆಸಿದವು.
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಯನ್ನು ಯಶಸ್ವಿಗೊಳಿಸಿದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಯನ್ನು ಇಂದು ನಾಡಿನಿಂದ ಬೀಳ್ಕೊಡುವ ಕಾರ್ಯಕ್ರಮವನ್ನು ಅರಮನೆ ಅಂಗಳದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮೊದಲಿಗೆ ದಸರಾ ಗಜಪಡೆಗಳಿಗೆ ವಿಶೇಷ ಪೂಜೆ ಸಲ್ಲಿಸಿ ವಿವಿಧ ಹಣ್ಣು ಹಂಪಲು ಹಾಗೂ ಕಬ್ಬನ್ನು ನೀಡಲಾಯಿತು. ಬಳಿಕ ಆನೆಗಳನ್ನು ಒಂದೊಂದರಂತೆ ಲಾರಿಗೆ ಹತ್ತಿಸಿ ಬೀಳ್ಕೊಡಲಾಯಿತು.
ಅಲ್ಲಿ ನೆರೆದಿದ್ದ ಸಾರ್ವಜನಿಕರು, ಅಭಿಮಾನಿಗಳು, ಅಧಿಕಾರಿಗಳು, ಅರಣ್ಯ ಇಲಾಖೆ ಸಿಬ್ಬಂದಿ ದಸರಾ ಗಜಪಡೆಯನ್ನು ಲಾರಿಗೆ ಹತ್ತಿಸಿ ಒಲ್ಲದ ಮನಸ್ಸಿನಿಂದಲೇ ಅವುಗಳನ್ನು ಕಳುಹಿಸಿಕೊಟ್ಟರು. ಈ ವೇಳೆ ಅರಮನೆಯ ಆನೆಗಳು ಸಹ ದಸರಾ ಆನೆಗಳಿಗೆ ಅಪ್ಪುಗೆಯ ಬೀಳ್ಕೊಡುಗೆ ಕೊಟ್ಟಿದ್ದು ವಿಶೇಷವೆನಿಸಿತು.
ಕಾಡಿನಿಂದ ನಾಡಿಗೆ ಬಂದಿದ್ದ ಮಾವುತರು, ಕಾವಾಡಿಗಳ ಮಕ್ಕಳು ಸಹ ಬೇಸರದಿಂದಲೇ ತಮ್ಮ ಬ್ಯಾಗುಗಳನ್ನು ಎತ್ತಿಕೊಂಡು ತಮ್ಮ ತಮ್ಮ ಸ್ವಸ್ಥಾನಕ್ಕೆ ಮರಳಿದರು.
ಈ ವೇಳೆ ಡಿಸಿಎಫ್ ಪ್ರಭುಗೌಡ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…