ಮೈಸೂರು: ದಸರಾ ಹಬ್ಬ ಕೇವಲ ಒಂದು ಜನಾಂಗಕ್ಕೆ ಸೀಮಿತವಾಗಿರದೇ ಇಡೀ ನಾಡೇ ಹಬ್ಬವನ್ನು ಆಚರಣೆ ಮಾಡುತ್ತದೆ ಎಂದು ದಸರಾ ಉದ್ಘಾಟಕರಾದ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಹೇಳಿದ್ದಾರೆ.
ಈ ಬಗ್ಗೆ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ನೆರವೇರಿಸಿ ಭಾಷಣ ಮಾಡಿದ ಹಂ.ಪ.ನಾಗರಾಜಯ್ಯ ಅವರು, ಅನೇಕ ಹಬ್ಬಗಳು ಒಂದೆರಡು ದಿನಗಳಿಗೆ ಸೀಮಿತವಾಗಿವೆ. ಆದರೆ ದಸರಾ ಹಲವು ದಿನಗಳ ಕಾಲ ನಡೆಯಲಿದೆ. ಇದು ನಾಡಿನ ಉದ್ದಗಲಕ್ಕೂ ಅನೇಕ ಪ್ರಭಾವ ಬೀರಿದೆ ಎಂದರು.
ಇನ್ನು ಬಾಲ್ಯದಲ್ಲಿ ನೋಡಿದ ದಸರಾ ಬಗ್ಗೆ ಸಂತಸ ವ್ಯಕ್ತಪಡಿಸಿದ ಅವರು, ತಾಯಿಯ ಜೊತೆ ಬೊಂಬೆ ಖರೀದಿ ಮಾಡಿದ್ದ ಬಗ್ಗೆ ಮಾಹಿತಿ ನೀಡಿದರು.
ಇದು ಅರಮನೆಯ ಹಬ್ಬವಲ್ಲ, ಜನರ ಹಬ್ಬ. ಇದನ್ನು ಸರ್ಕಾರ ಸಂಭ್ರಮದಿಂದ ಆಚರಿಸುತ್ತಿದೆ. ಈ ಆಚರಣೆಯಿಂದ ಕರ್ನಾಟಕದ ಸಾಂಸ್ಕೃತಿಕ ಪಾರಂಪರ್ಯ ಮುಂದಿನ ಪೀಳಿಗೆಗೂ ಪರಿಚಯವಾಗುತ್ತದೆ ಎಂದು ಹೇಳಿದರು.
ಇನ್ನು ಇಸ್ರೇಲ್-ಪ್ಯಾಲೆಸ್ತೇನ್, ರಷ್ಯಾ-ಉಕ್ರೇನ್ ಯುದ್ಧ ನಿಂತು ಶಾಂತಿ ನೆಲೆಸಬೇಕು. ಹೆಣ್ಣು ಭ್ರೂಣ ಹತ್ಯೆ ತಡೆಯಲು ಚಾಮುಂಡೇಶ್ವರಿ ದೇವಿ ತಂದೆ-ತಾಯಿಯರಿಗೆ ಸದ್ಬುದ್ಧಿ ಅನುಗ್ರಹಿಸಲಿ ಎಂದು ಬೇಡಿದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…