Mysore
14
clear sky

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ದಸರಾ ಚಲನಚಿತ್ರೋತ್ಸವ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು ದಸರಾ ಚಲನಚಿತ್ರೋತ್ಸವದ ಉದ್ಘಾಟನೆ ನೆರವೇರಿಸಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಇಂದು ದಸರಾ ಚಲನಚಿತ್ರೋತ್ಸವ ಉದ್ಘಾಟನೆ ನೆರವೇರಿತು.

ಕಾರ್ಯಕ್ರಮದಲ್ಲಿ ನಟರಾದ ರಮೇಶ್‌ ಅರವಿಂದ್‌, ಸಾಧು ಕೋಕಿಲ, ನಟಿ ಅಕ್ಷಿತ ಬೋಪಯ್ಯ, ಸಪ್ತಮಿ ಗೌಡ, ಶರಣ್ಯ ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಇನ್ನು ಸಾರ್ವಜನಿಕರು ಕಡಿಮೆ ವೆಚ್ಚದಲ್ಲಿ ಕನ್ನಡ, ತಮಿಳು, ಇಂಗ್ಲಿಷ್‌ ಸೇರಿದಂತೆ ಇನ್ನಿತರ ಭಾಷೆಯ 100ಕ್ಕೂ ಅಧಿಕ ಸಿನಿಮಾಗಳನ್ನು ವೀಕ್ಷಣೆ ಮಾಡಬಹುದಾಗಿದೆ.

ಚಲನಚಿತ್ರೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ವೆಂಕಟೇಶ್‌, ಎಚ್.ಡಿ.ಕೋಟೆ ಶಾಸಕ ಅನಿಲ್‌ ಚಿಕ್ಕಮಾದು ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.

 

Tags:
error: Content is protected !!