ಮೈಸೂರು: ವಾಮಮಾರ್ಗದಲ್ಲಿ ಸರ್ಕಾರ ಉರುಳಿಸಲು ಪ್ಲಾನ್ ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಚಾಮುಂಡೇಶ್ವರಿ ದಯೆಯಿಂದ ನಾನು ಇದುವರೆಗೂ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿಲ್ಲದಿರುವುದಿಂದಲೇ ನಾನು ಉಳಿದಿದ್ದೇನೆ. ರಾಜ್ಯದ ಜನರ 5 ವರ್ಷ ನನಗೆ ಆಶೀರ್ವಾದ ಮಾಡಿದ್ದಾರೆ. ಅರಸು ಬಳಿಕ ಪೂರ್ವಾವಧಿ ಪೂರೈಸಿದ ಸಿಎಂ ನಾನೇ ಆಗಿದ್ದೇನೆ. ನಾನು ಯಾವುದೇ ತಪ್ಪು ಮಾಡಿಲ್ಲ. ಆದ್ದರಿಂದ ಈಗಲೂ ನಾನೇ ಸಿಎಂ ಆಗಿ 5 ವರ್ಷ ಪೂರ್ಣಗೊಳಿಸುವೆ. ನಮ್ಮ ಸರ್ಕಾರಕ್ಕೆ ಚಾಮುಂಡೇಶ್ವರಿ ತಾಯಿಯ ಆಶೀರ್ವಾದವಿದೆ. ಸತ್ಯಕ್ಕೆ ಎಂದಿದ್ದರೂ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ಯಪಡಿಸಿದ್ದಾರೆ.





