ಮೈಸೂರು: ಈ ಬಾರಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರು ಹಾಗೂ ರೈತರ ಬದುಕು ಹಸನಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಎಲ್ಲಾ ಕಾರ್ಯಕ್ರಮಗಳ ಮೇಲೂ ಇರುತ್ತೆ ಎಂಬ ನಂಬಿಕೆಯಿದೆ. ಏನೇ ಸಮಸ್ಯೆ ಇದ್ದರೂ ನಮ್ಮ ಸರ್ಕಾರ ಜನಸಾಮಾನ್ಯರ ಪಾಲಿಗೆ ಬೆಳಕಾಗುತ್ತಿದೆ ಎಂದರು.
ಇನ್ನು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆ ಬಗ್ಗೆ ಮಾತನಾಡಿ ಖುಷಿ ವ್ಯಕ್ತಪಡಿಸಿದ ಅವರು, ಮೊದಲಿಗೆ ತಾಯಿ ಚಾಮುಂಡೇಶ್ವರಿಗೆ ಯೋಜನೆಯ 2000 ರೂಪಾಯಿ ನೀಡಿ ಆಶೀರ್ವಾದ ಪಡೆದುಕೊಂಡೆವು. ಆ ಬಳಿಕ 5 ವರ್ಷದ ಹಣವನ್ನು ತಾಯಿಗೆ ನೀಡಿ, ಗ್ಯಾರಂಟಿ ಯೋಜನೆಗೆ ಯಾವುದೇ ಅಡ್ಡಿ ಆಗದಿರಲಿ ಎಂದು ಬೇಡಿಕೊಂಡೆವು ಎಂದು ಮಾಹಿತಿ ನೀಡಿದರು.