Mysore
26
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಗ್ಯಾರಂಟಿ ಯೋಜನೆ ಜಾರಿ ಮಾಡಿ ರಾಜ್ಯ ಸರ್ಕಾರ ಜನರ ಪರ ಕೆಲಸ ಮಾಡುತ್ತಿದೆ: ಎಚ್.ಸಿ.ಮಹದೇವಪ್ಪ

ಮೈಸೂರು: ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿ ರಾಜ್ಯ ಸರ್ಕಾರ ಜನರ ಪರ ಕೆಲಸ ಮಾಡುತ್ತಿದೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಈ ಬಗ್ಗೆ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು, ಈ ಬಾರಿ ಹೆಚ್ಚು ಮಳೆಯಾಗಿ ಎಲ್ಲಾ ಜಲಾಶಯಗಳು ತುಂಬಿರುವ ಕಾರಣ ವಿಜೃಂಭಣೆಯಿಂದ ದಸರಾ ಆಚರಣೆ ಮಾಡಲಾಗುತ್ತಿದೆ ಎಂದರು.

ಇನ್ನು ತುಂಗಭದ್ರಾ ಜಲಾಶಯ ಕ್ರಸ್ಟ್‌ ಗೇಟ್‌ ಕೊಚ್ಚಿಹೋಗಿದ್ದ ಬಗ್ಗೆ ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ಪ್ರಾಣದ ಹಂಗು ತೊರೆದು ಗೇಟ್‌ ಸರಿ ಮಾಡಿದ ಅಧಿಕಾರಿಗಳ ಕೆಲಸಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

ಇನ್ನು ಪಂಚ ಗ್ಯಾರಂಟಿ ಯೋಜನೆ ಜಾರಿ ಮಾಡಿ ಸರ್ಕಾರ ಜನಸಾಮಾನ್ಯರ ಪರವಿದೆ. ನಮ್ಮ ಸರ್ಕಾರ ರೈತರ ಪರವಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ.

 

Tags:
error: Content is protected !!