ಮೈಸೂರು: ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಮಾಡಿದ್ದಾರೆ.
ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಸಿದ್ದರಾಮಯ್ಯ ಚಾಮುಂಡೇಶ್ವರಿ ಆಶೀರ್ವಾದದಿಂದ 2 ಬಾರಿ ಸಿಎಂ ಆಗಿದ್ದಾರೆ. ಆದರೆ ಎಲ್ಲರೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳುತ್ತಿದ್ದಾರೆ. ತಾಕತ್ ಇದ್ರೆ ಎಫ್‌ಐಆರ್ ಆದವರೆಲ್ಲಾ ರಾಜೀನಾಮೆ ಕೊಡಿ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಮಾಡಿದರು.
ಇನ್ನು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಜಿ.ಟಿ.ದೇವೇಗೌಡ ಅವರು, ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು? ಎಫ್‌ಐಆರ್ ಆದ ಮಾತ್ರಕ್ಕೆ ರಾಜೀನಾಮೆ ಕೊಡಬೇಕಾ? ಎಫ್‌ಐಆರ್ ಆದವರು ಜೆಡಿಎಸ್‌ನಲ್ಲೂ ಇದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಜವಾಬ್ದಾರಿ ಬೇಡ್ವಾ? ಒಂದು ವೇಳೆ ಎಚ್‌ಡಿಕೆಗೆ ರಾಜೀನಾಮೆ ಕೊಡಿ ಅಂದರೆ ಅವರು ಕೊಡ್ತಾರಾ ಎಂದು ಪ್ರಶ್ನಿಸಿದರು. ಇದೆಲ್ಲವನ್ನು ಬಿಟ್ಟು ಕುಮಾರಸ್ವಾಮಿ ಅವರು ಕೇಂದ್ರದಿಂದ ಯೋಜನೆ ತರುವ ಬಗ್ಗೆ ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು.