ನಮ್ಮ ಮೈಸೂರ ದಸರಾ 2024

ಸಿದ್ದರಾಮಯ್ಯ ಚಾಮುಂಡಿ ದೇವಿಯ ವರಪುತ್ರ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್‌ ಮಾಡಿದ್ದಾರೆ.

ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಸಿದ್ದರಾಮಯ್ಯ ಚಾಮುಂಡೇಶ್ವರಿ ಆಶೀರ್ವಾದದಿಂದ 2 ಬಾರಿ ಸಿಎಂ ಆಗಿದ್ದಾರೆ. ಆದರೆ ಎಲ್ಲರೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳುತ್ತಿದ್ದಾರೆ. ತಾಕತ್‌ ಇದ್ರೆ ಎಫ್‌ಐಆರ್‌ ಆದವರೆಲ್ಲಾ ರಾಜೀನಾಮೆ ಕೊಡಿ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್‌ ಮಾಡಿದರು.

ಇನ್ನು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಜಿ.ಟಿ.ದೇವೇಗೌಡ ಅವರು, ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು? ಎಫ್‌ಐಆರ್‌ ಆದ ಮಾತ್ರಕ್ಕೆ ರಾಜೀನಾಮೆ ಕೊಡಬೇಕಾ? ಎಫ್‌ಐಆರ್‌ ಆದವರು ಜೆಡಿಎಸ್‌ನಲ್ಲೂ ಇದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಜವಾಬ್ದಾರಿ ಬೇಡ್ವಾ? ಒಂದು ವೇಳೆ ಎಚ್‌ಡಿಕೆಗೆ ರಾಜೀನಾಮೆ ಕೊಡಿ ಅಂದರೆ ಅವರು ಕೊಡ್ತಾರಾ ಎಂದು ಪ್ರಶ್ನಿಸಿದರು. ಇದೆಲ್ಲವನ್ನು ಬಿಟ್ಟು ಕುಮಾರಸ್ವಾಮಿ ಅವರು ಕೇಂದ್ರದಿಂದ ಯೋಜನೆ ತರುವ ಬಗ್ಗೆ ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾಪಿ ಮಾಡು ಎಂದು ಹೇಳಿದ ಗುರುಗಳ ಮಾತನ್ನು ಧಿಕ್ಕರಿಸಿದೆ, ಆದರೆ ಅವರನ್ನು ದ್ವೇಷಿಸಲಿಲ್ಲ

ನಮ್ಮ ತಂದೆ ಪೋರ್‌ಬಂದರನ್ನು ಬಿಟ್ಟು ರಾಜ ಕೋಬಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ…

3 hours ago

ರಾಷ್ಟ್ರಪಿತನ ‘ಸತ್ಯಾನ್ವೇಷಣೆ’ಗೆ ನೂರು ವರುಷ

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಭಾಗಿತ್ವದಲಿ ಎಳೆಯ ಮಕಳ ಅಂಗಳಕೆ…

3 hours ago

ಡಿಜಿಟಲ್ ವೇದಿಕೆಗಳಲ್ಲಿ ಅಶ್ಲೀಲತೆಯ ಆರ್ಭಟ

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಜನಶೀಲತೆಯ ವೇದಿಕೆಗಳಾಗುವ ಬದಲು ಹಣದಾಸೆಗಾಗಿ ಅಶ್ಲೀಲತೆಯನ್ನು ಪ್ರದರ್ಶಿಸುವ ಮಾರುಕಟ್ಟೆಗಳಾಗುತ್ತಿರುವುದು ಆತಂಕಕಾರಿ ವಿದ್ಯಮಾನ. ಪ್ರಭಾವಿ ವ್ಯಕ್ತಿಗಳು…

3 hours ago

ಮೆದಗನಾಣೆ ಗ್ರಾಮಕ್ಕೆ ಕೊನೆಗೂ ವಿದ್ಯುತ್ ಸಂಪರ್ಕ

೮ ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆದಿವಾಸಿ ಹೋರಾಟ ಸಮಿತಿ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಮೆದಗನಾಣೆ…

3 hours ago

ಚಾರಣಕ್ಕೆ ನೇಚರ್ ಗೈಡ್ ಕಡ್ಡಾಯ

ಜಿಪಿಎಸ್ ವಾಕಿಟಾಕಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ ಎಸ್‌ಒಪಿ ಬಿಡುಗಡೆ ಮಾಡಿದ ಸಚಿವ ಈಶ್ವರ್‌ ಖಂಡ್ರೆ  ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆ…

3 hours ago