ನಮ್ಮ ಮೈಸೂರ ದಸರಾ 2024

ತಾಯಿ ಚಾಮುಂಡೇಶ್ವರಿಗೆ ಸತತ ಏಳನೇ ಬಾರಿಗೆ ಪುಷ್ಪಾರ್ಚನೆ ಮಾಡಿದ ಸಿಎಂ ಸಿದ್ದರಾಮಯ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಅವರು ಸತತ 7ನೇ ಬಾರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಾಖಲೆ ಬರೆದಿದ್ದಾರೆ.

ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಾರಂಭವಾಗಿ 414 ವರ್ಷಗಳು ಕಳೆದಿವೆ. ಇಷ್ಟು ವರ್ಷಗಳಲ್ಲಿ ಪ್ರಥಮ ಬಾರಿಗೆ ಹಾಗೂ ಸತತ 7 ಬಾರಿ ಸಿದ್ದರಾಮಯ್ಯ ಅವರು, ಜಂಬೂಸವಾರಿಯಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು 2014 ರಿಂದ 2018ರವರೆಗೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅರ್ಜುನ ಆನೆ ಜಂಬೂಸವಾರಿಯಲ್ಲಿ 750 ಕೆ.ಜಿ.ಯ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಿತ್ತು. ಆ ನಂತರ 2023 ಮತ್ತು ಈ ಬಾರಿ ಅಭಿಮನ್ಯು ಆನೆ ಅದ್ದೂರಿಯಾಗಿ ಗಜ ಗಾಂಭೀರ್ಯದಿಂದ ಅಂಬಾರಿ ಹೊತ್ತು ಬನ್ನಿಮಂಟಪದವರೆಗೆ ಸಾಗಿದೆ.

ಈ ವರ್ಷ ನಾಡದೇವಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಎಚ್‌.ಸಿ.ಮಹದೇವಪ್ಪ, ಶಿವರಾಜ್‌ ತಂಗಡಗಿ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ ಹಾಗೂ ಮೈಸೂರು ನಗರ ಪೊಲೀಸ್‌ ಆಯುಕ್ತರಾದ ಸೀಮಾ ಲಾಟ್ಕರ್‌ ಅವರು ಸಿಎಂ ಸಿದ್ದರಾಮಯ್ಯರಿಗೆ ಸಾಥ್‌ ನೀಡಿದರು. ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅನುಪಸ್ಥಿತಿಯಲ್ಲಿ ಪುಷ್ಪಾರ್ಚನೆ ಸಲ್ಲಿಸಲಾಯಿತು.

 

 

ಆಂದೋಲನ ಡೆಸ್ಕ್

Recent Posts

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

8 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

27 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

50 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago

ಓದುಗರ ಪತ್ರ: ರತನ್‌ ಟಾಟಾರಿಗೆ ಭಾರತರತ್ನ ನೀಡಿ

ಕೆಲ ಗಣ್ಯರು ನಿಧನರಾದಾಗ ದುಃಖವಾಗುತ್ತದೆ. ಇನ್ನೂ ಕೆಲ ಗಣ್ಯರನ್ನು ಕಳೆದುಕೊಂಡಾಗ ದುಃಖದ ಕೋಡಿಯೇ ಹರಿಯುತ್ತದೆ; ದೇಶಾದ್ಯಂತ ಮೌನ ಹೆಪ್ಪುಗಟ್ಟುತ್ತದೆ. ಹೀಗೆ…

3 hours ago