ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಅವರು ಸತತ 7ನೇ ಬಾರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಾಖಲೆ ಬರೆದಿದ್ದಾರೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಾರಂಭವಾಗಿ 414 ವರ್ಷಗಳು ಕಳೆದಿವೆ. ಇಷ್ಟು ವರ್ಷಗಳಲ್ಲಿ ಪ್ರಥಮ ಬಾರಿಗೆ ಹಾಗೂ ಸತತ 7 ಬಾರಿ ಸಿದ್ದರಾಮಯ್ಯ ಅವರು, ಜಂಬೂಸವಾರಿಯಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು 2014 ರಿಂದ 2018ರವರೆಗೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅರ್ಜುನ ಆನೆ ಜಂಬೂಸವಾರಿಯಲ್ಲಿ 750 ಕೆ.ಜಿ.ಯ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಿತ್ತು. ಆ ನಂತರ 2023 ಮತ್ತು ಈ ಬಾರಿ ಅಭಿಮನ್ಯು ಆನೆ ಅದ್ದೂರಿಯಾಗಿ ಗಜ ಗಾಂಭೀರ್ಯದಿಂದ ಅಂಬಾರಿ ಹೊತ್ತು ಬನ್ನಿಮಂಟಪದವರೆಗೆ ಸಾಗಿದೆ.
ಈ ವರ್ಷ ನಾಡದೇವಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಸಿ.ಮಹದೇವಪ್ಪ, ಶಿವರಾಜ್ ತಂಗಡಗಿ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಹಾಗೂ ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಸಿಎಂ ಸಿದ್ದರಾಮಯ್ಯರಿಗೆ ಸಾಥ್ ನೀಡಿದರು. ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅನುಪಸ್ಥಿತಿಯಲ್ಲಿ ಪುಷ್ಪಾರ್ಚನೆ ಸಲ್ಲಿಸಲಾಯಿತು.
ನವದೆಹಲಿ: ನವೆಂಬರ್ 26ರಂದು ಮೈಸೂರಿನಲ್ಲಿ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್ ಹೈಕಮಾಂಡ್…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದ ರಾಜ್ಯ ಹೆದ್ದಾರಿಯಲ್ಲಿ ಅಕ್ರಮವಾಗಿ ಶುಲ್ಕ ವಸೂಲಿ ಮಾಡುತ್ತಿರುವುದನ್ನು…
ದಕ್ಷಿಣ ಕನ್ನಡ: ಸೌಜನ್ಯ ಪ್ರಕರಣದ ತನಿಖೆಯಲ್ಲಿ ಎಸ್‌ಐಟಿ ಮತ್ತೊಂದು ಹೆಜ್ಜೆ ಇಟ್ಟಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಮೂವರು FSL ವೈದ್ಯರನ್ನೊಳಗೊಂಡ…
ಬೆಂಗಳೂರು: ‘ನಾವೆಲ್ಲರೂ ಸ್ನೇಹಿತರು, ನಾವೆಲ್ಲರೂ ಭಾರತೀಯರು’ ಎಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೊತೆಗಿನ ಭೇಟಿಯ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.…
ಬೆಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ಯಾವ ಚಿಕಿತ್ಸೆಗೆ ಎಷ್ಟು ಖರ್ಚು? ಈ ಮಾಹಿತಿ ರೋಗಿಗಳಿಗೆ ಮೊದಲೇ ಸಿಗುವಂತೆ ಮಾಡಲು ಆರೋಗ್ಯ ಇಲಾಖೆ ಕಟ್ಟುನಿಟ್ಟಿನ…
ಮೈಸೂರು: ತಾಲೂಕಿನ ಮರಸೆ ಗ್ರಾಮದಲ್ಲಿ ಸೆರೆಹಿಡಿದಿದ್ದ ಚಿರತೆಯೊಂದು ಅರಣ್ಯ ಸಿಬ್ಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದು, ಈ ದೃಶ್ಯ ಮೊಬೈಲ್‌ನಲ್ಲಿ…