ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಈ ಬಗ್ಗೆ ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಮಾಹಿತಿ ನೀಡಿದ್ದಾರೆ.
ಈ ಬಾರಿಯ ದಸರಾ ಮಹೋತ್ಸವಕ್ಕೆ ಎರಡು ಹಂತದ ಭದ್ರತೆ ಕೈಗೊಳ್ಳಲಾಗಿದ್ದು, ಜಂಬೂಸವಾರಿ ಸಾಗುವ ಮಾರ್ಗದಲ್ಲಿ ವ್ಯಾಪಕ ಬಂದೋಬಸ್ತ್ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದ ವಿವಿಧೆಡೆಗಳಿಂದ ಆಗಮಿಸಿರುವ ನಾಲ್ಕು ಸಾವಿರಕ್ಕೂ ಹೆಚ್ಚು ಪೊಲೀಸರು ಜಂಬೂಸವಾರಿ ದಿನ ಬಿಗಿ ಭದ್ರತೆ ಕೈಗೊಂಡು ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಿದ್ದಾರೆ.
ಇನ್ನು ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ದೇಶ ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ರಕ್ಷಣೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…