ನಮ್ಮ ಮೈಸೂರ ದಸರಾ 2024

ದಸರಾ ಡ್ರೋನ್ ಶೋ: ಅನಧಿಕೃತ ಡ್ರೋನ್ ವಿಡಿಯೋ ಚಿತ್ರೀಕರಣ ನಿಷೇಧ

ನಿಯಮ ಮೀರಿದರೆ ಕಠಿಣ ಕಾನೂನು ಕ್ರಮಕ್ಕೆ ಸೆಸ್ಕ್ ನಿರ್ಧಾರ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದ ವತಿಯಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಅತಿದೊಡ್ಡ ಡ್ರೋನ್ ಪ್ರದರ್ಶನ ನಡೆಸಲಾಗುತ್ತಿದ್ದು, ಅ.6 ಮತ್ತು 7ರಂದು ನಡೆದ ಪ್ರದರ್ಶನ ಅಭೂತಪೂರ್ವ ಯಶಸ್ಸಿನೊಂದಿಗೆ ನೋಡುಗರ ಮೆಚ್ಚುಗೆಗೆ ಪಾತ್ರವಾಗಿದೆ.

ಆದರೆ ಡ್ರೋನ್ ಪ್ರದರ್ಶನ ನಡೆಯುವ ವೇಳೆ ಕೆಲವು ಖಾಸಗಿ ಸಂಸ್ಥೆಗಳು ಹಾಗೂ ವ್ಯಕ್ತಿಗಳು ಡ್ರೋನ್ ಗಳನ್ನು ಹಾರಿಸಿ ಡ್ರೋನ್ ಪ್ರದರ್ಶನದ ದೃಶ್ಯಾವಳಿಗಳನ್ನು ಸೆರೆಹಿಡಿಯುತ್ತಿರುವುದು ಹಾಗೂ ಡ್ರೋನ್ ಗಳ ಮೂಲಕ ಚಿತ್ರೀಕರಿಸಿದ ದೃಶ್ಯದ ತುಣುಕುಗಳನ್ನು ಸಾಮಾಜಿಕ ಮಾದ್ಯಮದಲ್ಲಿ ಹರಿಯಬಿಡುತ್ತಿರುವುದು ಕಂಡು ಬಂದಿದೆ.

ಈ ಹಿನ್ನೆಲೆಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೆ ಡ್ರೋನ್‌ಗಳನ್ನು ಹಾರಿಸಿ, ಸೆಸ್ಕ್ ವತಿಯಿಂದ ದಿನಾಂಕ: 11.10.24 ಹಾಗೂ 12.10.24 ರಂದು ನಡೆಸಲಾಗುವ ಡ್ರೋನ್ ಪ್ರದರ್ಶನದ ದೃಶ್ಯಗಳನ್ನು ಚಿತ್ರೀಕರಿಸುವುದು ಹಾಗೂ ಡ್ರೋನ್ ಗಳ ಮೂಲಕ ಚಿತ್ರೀಕರಿಸಿದ ದೃಶ್ಯದ ತುಣುಕುಗಳನ್ನು ಸಾಮಾಜಿಕ ಮಾದ್ಯಮದಲ್ಲಿ ಹರಿಯಬಿಡುವುದು ಕಂಡುಬಂದಲ್ಲಿ ಅವರುಗಳ ವಿರುದ್ಧ ಸೈಬರ್ ಅಪರಾಧಗಳಿಗೆ ಸಂಬಂದಿಸಿದ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮಕೈಗೊಳ್ಳಲು ಸೆಸ್ಕ್ ‌ನಿರ್ಧರಿಸಿದೆ.

ಈಗಾಗಲೇ ಯಾರೆಲ್ಲಾ ಅನಧಿಕೃತವಾಗಿ ಡ್ರೋನ್ ಪ್ರದರ್ಶನವನ್ನು ಖಾಸಗಿಯಾಗಿ ಡ್ರೋನ್ ಮೂಲಕ ಚಿತ್ರೀಕರಿಸಿದ್ದಾರೆ ಅವರುಗಳ ವಿರುದ್ಧವೂ ಪ್ರಕರಣ ದಾಖಲಿಸಿ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು. ಕೇವಲ ಡ್ರೋನ್ ಪ್ರದರ್ಶನ ಮಾತ್ರವಲ್ಲದೆ ದಸರಾ ಅಂಗವಾಗಿ ಮೈಸೂರು ನಗರದಾದ್ಯಂತ ಸೆಸ್ಕ್ ವತಿಯಿಂದ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರದ ದೃಶ್ಯಗಳನ್ನು ಸಹ ಡ್ರೋನ್ ಮೂಲಕ ಅನಧಿಕೃತವಾಗಿ ಚಿತ್ರೀಕರಿಸುವುದು ಕೂಡ ಅಪರಾಧವಾಗಿದೆ. ಹಾಗಾಗಿ, ಯಾವುದೇ ಸಂಸ್ಥೆಗಳು ಹಾಗೂ ವ್ಯಕ್ತಿಗಳು ಸೆಸ್ಕ್ ವತಿಯಿಂದ ನಡೆಸಲಾಗುತ್ತಿರುವ ಡ್ರೋನ್ ಪ್ರದರ್ಶನದ ದೃಶ್ಯಾವಳಿಗಳನ್ನು ಡ್ರೋನ್ ಗಳ ಮೂಲಕ ಅನಧಿಕೃತ ಚಿತ್ರೀಕರಣ ಮಾಡದಂತೆ ಈ ಮೂಲಕ ಎಚ್ಚರಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

‘ಹೆರಿಟೇಜ್ ಟೂರಿಸಂ ಅಭಿವೃದ್ಧಿಗೆ ಯೋಜನೆ’

ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …

2 hours ago

ಜನವರಿ.3ರಿಂದ ನೈಸರ್ಗಿಕ ಕೃಷಿ ಕಾರ್ಯಾಗಾರ

ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…

2 hours ago

ಅಂಬೇಡ್ಕರ್ ಜೀವಜಲವನ್ನು ಹರಿಯುವಂತೆ ಮಾಡುವುದು ನಮ್ಮ ಕೆಲಸವಾಗಿದೆ

ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…

2 hours ago

ತಾಯಿ ನಂಜನಗೂಡಿನ ನಂಜಿ, ಮಗ ನಿಕೋಲಸ್ ವಿಶ್ವವಿಖ್ಯಾತ ಕ್ಯಾಮೆರಾಮ್ಯಾನ್

ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…

2 hours ago

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

12 hours ago