ನಿಯಮ ಮೀರಿದರೆ ಕಠಿಣ ಕಾನೂನು ಕ್ರಮಕ್ಕೆ ಸೆಸ್ಕ್ ನಿರ್ಧಾರ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದ ವತಿಯಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಅತಿದೊಡ್ಡ ಡ್ರೋನ್ ಪ್ರದರ್ಶನ ನಡೆಸಲಾಗುತ್ತಿದ್ದು, ಅ.6 ಮತ್ತು 7ರಂದು ನಡೆದ ಪ್ರದರ್ಶನ ಅಭೂತಪೂರ್ವ ಯಶಸ್ಸಿನೊಂದಿಗೆ ನೋಡುಗರ ಮೆಚ್ಚುಗೆಗೆ ಪಾತ್ರವಾಗಿದೆ.
ಆದರೆ ಡ್ರೋನ್ ಪ್ರದರ್ಶನ ನಡೆಯುವ ವೇಳೆ ಕೆಲವು ಖಾಸಗಿ ಸಂಸ್ಥೆಗಳು ಹಾಗೂ ವ್ಯಕ್ತಿಗಳು ಡ್ರೋನ್ ಗಳನ್ನು ಹಾರಿಸಿ ಡ್ರೋನ್ ಪ್ರದರ್ಶನದ ದೃಶ್ಯಾವಳಿಗಳನ್ನು ಸೆರೆಹಿಡಿಯುತ್ತಿರುವುದು ಹಾಗೂ ಡ್ರೋನ್ ಗಳ ಮೂಲಕ ಚಿತ್ರೀಕರಿಸಿದ ದೃಶ್ಯದ ತುಣುಕುಗಳನ್ನು ಸಾಮಾಜಿಕ ಮಾದ್ಯಮದಲ್ಲಿ ಹರಿಯಬಿಡುತ್ತಿರುವುದು ಕಂಡು ಬಂದಿದೆ.
ಈ ಹಿನ್ನೆಲೆಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೆ ಡ್ರೋನ್‌ಗಳನ್ನು ಹಾರಿಸಿ, ಸೆಸ್ಕ್ ವತಿಯಿಂದ ದಿನಾಂಕ: 11.10.24 ಹಾಗೂ 12.10.24 ರಂದು ನಡೆಸಲಾಗುವ ಡ್ರೋನ್ ಪ್ರದರ್ಶನದ ದೃಶ್ಯಗಳನ್ನು ಚಿತ್ರೀಕರಿಸುವುದು ಹಾಗೂ ಡ್ರೋನ್ ಗಳ ಮೂಲಕ ಚಿತ್ರೀಕರಿಸಿದ ದೃಶ್ಯದ ತುಣುಕುಗಳನ್ನು ಸಾಮಾಜಿಕ ಮಾದ್ಯಮದಲ್ಲಿ ಹರಿಯಬಿಡುವುದು ಕಂಡುಬಂದಲ್ಲಿ ಅವರುಗಳ ವಿರುದ್ಧ ಸೈಬರ್ ಅಪರಾಧಗಳಿಗೆ ಸಂಬಂದಿಸಿದ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮಕೈಗೊಳ್ಳಲು ಸೆಸ್ಕ್ ನಿರ್ಧರಿಸಿದೆ.
ಈಗಾಗಲೇ ಯಾರೆಲ್ಲಾ ಅನಧಿಕೃತವಾಗಿ ಡ್ರೋನ್ ಪ್ರದರ್ಶನವನ್ನು ಖಾಸಗಿಯಾಗಿ ಡ್ರೋನ್ ಮೂಲಕ ಚಿತ್ರೀಕರಿಸಿದ್ದಾರೆ ಅವರುಗಳ ವಿರುದ್ಧವೂ ಪ್ರಕರಣ ದಾಖಲಿಸಿ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು. ಕೇವಲ ಡ್ರೋನ್ ಪ್ರದರ್ಶನ ಮಾತ್ರವಲ್ಲದೆ ದಸರಾ ಅಂಗವಾಗಿ ಮೈಸೂರು ನಗರದಾದ್ಯಂತ ಸೆಸ್ಕ್ ವತಿಯಿಂದ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರದ ದೃಶ್ಯಗಳನ್ನು ಸಹ ಡ್ರೋನ್ ಮೂಲಕ ಅನಧಿಕೃತವಾಗಿ ಚಿತ್ರೀಕರಿಸುವುದು ಕೂಡ ಅಪರಾಧವಾಗಿದೆ. ಹಾಗಾಗಿ, ಯಾವುದೇ ಸಂಸ್ಥೆಗಳು ಹಾಗೂ ವ್ಯಕ್ತಿಗಳು ಸೆಸ್ಕ್ ವತಿಯಿಂದ ನಡೆಸಲಾಗುತ್ತಿರುವ ಡ್ರೋನ್ ಪ್ರದರ್ಶನದ ದೃಶ್ಯಾವಳಿಗಳನ್ನು ಡ್ರೋನ್ ಗಳ ಮೂಲಕ ಅನಧಿಕೃತ ಚಿತ್ರೀಕರಣ ಮಾಡದಂತೆ ಈ ಮೂಲಕ ಎಚ್ಚರಿಸಲಾಗಿದೆ.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…