ನಮ್ಮ ಮೈಸೂರ ದಸರಾ 2024

ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್ ಅವರ ಕೊಡುಗೆ ಅಪಾರ: ಸಿಎಂ ಸಿದ್ದರಾಮಯ್ಯ

ಜನರು ಸಿನಿಮಾಗಳನ್ನು ಚಿತ್ರಮಂದಿರಗಳಲ್ಲಿ ವೀಕ್ಷಿಸಬೇಕು

150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಮೈಸೂರಿನ ಇಮ್ಮಾವು ಗ್ರಾಮದಲ್ಲಿ 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರು ನಗರದಲ್ಲಿ ದಸರಾ ಉತ್ಸವ ಅಂಗವಾಗಿ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಹಿಂದಿನ ಬಾರಿ ನಾನು ಮುಖ್ಯಮಂತ್ರಿ ಆಗಿದ್ದಾಗ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ, ಇಮ್ಮಾವು ಗ್ರಾಮದಲ್ಲಿ 110 ಎಕರೆ ವಿಸ್ತೀರ್ಣದ ಭೂಮಿಯನ್ನು ಮೀಸಲಿರಿಸಲಾಗಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತಣೆಗೆ 50 ಎಕರೆ ಜಮೀನನ್ನು ಗುರುತಿಸಿ ನೀಡಲು ತೀರ್ಮಾನಿಸಲಾಗಿದೆ. ಮಾದರಿ ಸಿನಿಮಾ ನಗರಿಯನ್ನು ನಿರ್ಮಿಸುವುದು ಸರ್ಕಾರ ಹಾಗೂ ಚಿತ್ರರಂಗದವರ ಉದ್ದೇಶವಾಗಿದ್ದು, ಇನ್ನು ಮೂರು ವರ್ಷದೊಳಗೆ ಫಿಲಂಸಿಟಿಯನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದರು.

ಹೆಚ್ಚು ಕನ್ನಡ ಚಿತ್ರಗಳು ಬರಬೇಕು

ಚಿತ್ರರಂಗದ ಬೆಳವಣಿಗೆ ಸರ್ಕಾರ ಎಲ್ಲರೀತಿಯ ಬೆಂಬಲವನ್ನು ನೀಡುತ್ತಾ ಬಂದಿದೆ. ಕನ್ನಡ ಚಲನಚಿತ್ರಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು, ಚಿತ್ರರಂಗ ಬೆಳೆಯಬೇಕು. ಜನರು ಸಿನಿಮಾಗಳನ್ನು ಚಿತ್ರಮಂದಿರಗಳಿಗೆ ಹೋಗಿಯೇ ವೀಕ್ಷಿಸಬೇಕೆಂದು ತಿಳಿಸಿದರು.

ಅಕ್ಟೋಬರ್-04 ರಿಂದ 10 ವರೆಗೆ ಸಿನಿಮಾ ಪ್ರದರ್ಶನ

ದಸರಾ ಚಲನಚಿತ್ರೋತ್ಸವ ಅಕ್ಟೋಬರ್-04 ರಿಂದ 10 ವರೆಗೆ ನಡೆಯಲಿದ್ದು, ದೇಶ ವಿದೇಶಗಳ ಪ್ರಶಸ್ತಿ ಪುರಸ್ಕøತ ಚಲನಚಿತ್ರಗಳು ಪ್ರದರ್ಶನವಾಗಲಿದೆ. ಚಲನಚಿತ್ರೋತ್ಸವದಲ್ಲಿ ಹಳೆಯ ಹಾಗೂ ಹೊಸ ಸಿನಿಮಾಗಳನ್ನು ವೀಕ್ಷಿಸುವ ಸುವರ್ಣ ಅವಕಾಶವಿದ್ದು, ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಳ್ಳಬೇಕಾಗಿ ತಿಳಿಸಿದರು.

ಕನ್ನಡ ಚಿತ್ರರಂಗ ಮರೆಯಲಾಗದ ವ್ಯಕ್ತಿ ದ್ವಾರಕೀಶ್

ನಟ ನಿರ್ಮಾಪಕ ದಿವಂಗತ ದ್ವಾರಕೀಶ್ ಅವರು ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಈ ಬಾರಿ ದಸರಾ ಚಿತ್ರೋತ್ಸವವನ್ನು ದ್ವಾರಕೀಶ್ ಅವರ ಗೌರವಾರ್ಥವಾಗಿ ಹಮ್ಮಿಕೊಳ್ಳಲಾಗಿದೆ. ದ್ವಾರಕೀಶ್ ಅವರು ಕನ್ನಡ ಚಿತ್ರರಂಗದಲ್ಲಿ ಮರೆಯಲಾಗದ ವ್ಯಕ್ತಿ. ಹೆಲಿಕಾಪ್ಟರ್ ನಲ್ಲಿ ಮೈಸೂರಿಗೆ ದ್ವಾರಕೀಶ್ ಅವರ ಜೊತೆ ಪ್ರಯಾಣಿಸಿದ ನೆನಪನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಅವರೊಂದಿಗಿದ್ದ ಸ್ನೇಹ ಬಾಂಧವ್ಯದ ಬಗ್ಗೆ ತಿಳಿಸಿದರು. ದ್ವಾರಕೀಶ್ ಅವರ ಮಕ್ಕಳು ಕನ್ನಡ ಚಿತ್ರರಂಗಕ್ಕೆ ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

5 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

5 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

6 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

6 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

7 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

8 hours ago