Mysore
26
scattered clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು: ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಸಂವಿಧಾನವು ನಮ್ಮ ದೇಶದ ಕಾನೂನು ಆಗಿದ್ದು, ಸಂವಿಧಾನದ ಮೂಲ ಆಶಯಗಳನ್ನು ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕು ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.

ಇಂದು ಮೈಸೂರು ವಿಶ್ವ ವಿದ್ಯಾನಿಲಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣ, ಸೆನೆಟ್ ಭವನದಲ್ಲಿ ದಸರಾ ರಾಷ್ಟ್ರೀಯ ಸಮ್ಮೇಳನ ಉಪಸಮಿತಿ, ಜಿಲ್ಲಾಡಳಿತ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರ ಮಾನಸಗಂಗೋತ್ರಿ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಅಂಗಿಕಾರದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಪ್ರಭುತ್ವ ಮತ್ತು ಸಂವಿಧಾನ ಆಶಯ ಕುರಿತ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಕ್ಟೋಬರ್ 03 ರಿಂದ 12 ರವರೆಗೆ ದಸರಾ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಈ ಸಂದರ್ಭದಲ್ಲಿ ಸಂವಿಧಾನ ಕುರಿತ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಸಂವಿಧಾನವನ್ನು ಪ್ರತಿಯೊಬ್ಬರೂ ಅರಿವು ಮೂಡಿಸಿಕೊಳ್ಳಬೇಕು. ಈ ಕಾರ್ಯಕ್ರಮದ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ, ಪ್ರೊ ನಿರಂಜನ್, ಪ್ರೊ ಸೋಮಶೇಖರ್, ವಿಜಯ್ ಕುಮಾರ್ ಹೆಚ್. ಬಿ, ಪ್ರೊ ಸುದೀರ್ ಕೃಷ್ಣಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

Tags:
error: Content is protected !!