ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಶನಿವಾರ ನಡೆದ ವಿಜಯದಶಮಿ ಮೆರವಣಿಗೆಯಲ್ಲಿ ಭಾಗವಹಿಸಿ, ಪ್ರದರ್ಶನ ನೀಡಿದ ಉತ್ತಮ ಕಲಾ ತಂಡಗಳಿಗೆ ಬಹುಮಾನ ಘೋಷಿಸಲಾಗಿದೆ.
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸಿದ್ದರಾಪುದ ಸಂಜೀತ ಸಿ.ಕೋತ ನೇತೃತ್ವದ ರೇವಣ್ಣಸಿದ್ದೇಶ್ವರ ಯುವಕರ ಕಲಾಸಂಘದ ಸತ್ತಿಗೆ ಕುಣಿತಕ್ಕೆ ಪ್ರಥಮ ಬಹುಮಾನ ದೊರೆತಿದೆ. ಈ ಬಹುಮಾನವು 15ಸಾವಿರವನ್ನು ಒಳಗೊಂಡಿದೆ.
ಯಾದಗಿರಿಯ ವಿಶ್ವಾಸಪುರ ತಾಂಡಾದ ಮನೋಹರ ಖೇಮು ಪವಾರ ನೇತೃತ್ವದ ಲಂಬಾಣಿ ನೃತ್ಯ ಕಲಾತಂಡ, ಮಂಡ್ಯ ಜಿಲ್ಲೆಯ ಮದ್ದೂರಿನ ಕ್ಯಾತಘಟ್ಟದ ಕೀರ್ತಿನಿ ಮತ್ತು ಪ್ರಮೋದಿನಿ ನೇತೃತ್ವದ ಪೂಜಾಕುಣಿತ ಕಲಾವಿದರ ತಂಡ, ಮದ್ದೂರಿನ ಚಿಕ್ಕರಸಿನಕೆರೆಯ ಕಾಲಭೈರವೇಶ್ವರ ಯುವಕರ ತಂಡಗಳು ದ್ವಿತೀಯ ಸ್ಥಾನ ಪಡೆದು ತಲಾ 5 ಸಾವಿರು ನಗದು ಬಹುಮಾನ ಗಳಿಸಿದೆ.
ಹಾವೇರಿ ಜಿಲ್ಲೆಯ ವೀರಭದ್ರೇಶ್ವರ ಪುರವಂತಿಕೆ ಕಲಾತಂಡ ಹಾಗೂ ಕೋಲಾರ ಜಿಲ್ಲೆಯ ಸುಳದೇನಹಳ್ಳಿಯ ಮಾರುತಿ ಕಲಾವಿದರ ಸಂಘದ ಗಾರುಡಿ ಗೊಂಬೆ ತೃತೀಯ ಬಹುಮಾನ ಪಡೆದು, ತಲಾ 2.500 ಪಡೆದಿವೆ ಎಂದು ದಸರಾ ಮೆರವಣಿಗೆ ಉಪ ಸಮಿತಿಯ ಉಪ ವಿಶೇಷಾಧಿಕಾರಿ ಸೀಮಾ ಲಾಟ್ಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಜು ಕೋಟೆ ಎಚ್. ಡಿ. ಕೋಟೆ : ರಾಜ್ಯದ ಪ್ರಮುಖ ಜಲಾಶಯವಾದ ತಾಲ್ಲೂಕಿನ ಕಬಿನಿ ಜಲಾಶಯದ ನೀರಿನ ಮಟ್ಟ ಮಳೆಯ…
ಮೈಸೂರು : ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗಳು ಬುಧವಾರದಿಂದ…
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…