Mysore
20
scattered clouds

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಆಯ್ಕೆಯಾದ ಕೋಲಾರ ಸ್ತಬ್ಧಚಿತ್ರ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾಗಲು ಕೋಲಾರದ ಕೋಟಿಲಿಂಗೇಶ್ವರ ದೇವಾಲಯದ ಸ್ತಬ್ಧಚಿತ್ರ ಆಯ್ಕೆಯಾಗಿದೆ.

ಕೋಲಾರದ ಕೋಟಿಲಿಂಗೇಶ್ವರ, ಸೋಮೇಶ್ವರಸ್ವಾಮಿ ದೇವಸ್ಥಾನ ಹಾಗೂ ಮುಳಬಾಗಿಲಿನ ಕುರುಡು ಮಲೆ ಗಣಪತಿ ದೇವಾಲಯದ ಸ್ತಬ್ಧಚಿತ್ರಗಳನ್ನು ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಆಯ್ಕೆ ಮಾಡಿದ್ದಾರೆ. ಈ ಮೂಲಕ ಕೋಲಾರ ಜಿಲ್ಲೆಯನ್ನು ಪ್ರತಿನಿಧಿಸಲು ಕೋಟಿಲಿಂಗೇಶ್ವರ ದೇವಾಲಯದ ಸ್ತಬ್ಧಚಿತ್ರವನ್ನು ಸಮಿತಿಯವರು ಆಯ್ಕೆ ಮಾಡಿದ್ದಾರೆ ಎಂದು ಕೋಲಾರ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಮೂಲಕ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಜಂಬೂಸವಾರಿ ಮೆರವಣಿಗೆಗೆ ಮತ್ತಷ್ಟು ಮೆರುಗು ಹೆಚ್ಚಲಿದ್ದು, ಈ ಸ್ತಬ್ಧಚಿತ್ರದೊಂದಿಗೆ ಕೆಲ ಜಿಲ್ಲೆಗಳ ಸ್ತಬ್ಧಚಿತ್ರಗಳು ಸಹ ಮೆರವಣಿಗೆಯಲ್ಲಿ ಸಾಗಲಿವೆ.

Tags:
error: Content is protected !!