ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಹಿಳಾ ದಸರಾಗೆ ಸಚಿವ ಎಚ್.ಸಿ.ಮಹದೇವಪ್ಪ ಚಾಲನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ವತಿಯಿಂದ ಮೈಸೂರಿನ ಜೆ.ಕೆ.ಗ್ರೌಂಡ್‌ನಲ್ಲಿ ಆಯೋಜಿಸಿದ್ದ ಮಹಿಳಾ ದಸರಾವನ್ನು ಸಚಿವ ಎಚ್.ಸಿ.ಮಹದೇವಪ್ಪ ಉದ್ಘಾಟನೆ ಮಾಡಿದರು.
ಈ ವೇಳೆ ಮಾತನಾಡಿದ ಅವರು, ಇಂದು ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿ ಮಹಿಳಾ ಹಬ್ಬಕ್ಕೆ ಕಳೆ ತಂದಿರುವುದು ಬಹಳ ಸಂತಸವಾಗಿದೆ.
ಮಹಿಳೆಯರು ಮೂಢನಂಬಿಕೆಗೆ ಒಳಗಾಗದೇ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ನಿಮ್ಮ ಆಚರಣೆಗಳನ್ನು ಮಾಡಿ ಆದರೆ ಮೂಢನಂಬಿಕೆಗೆ ಬಲಿಯಾಗಬೇಡಿ ಎಂದು ಕರೆ ನೀಡಿದರು.