ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶದ ನಂತರ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಇಬ್ಬರು ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಈ ಪ್ರಕರಣದಲ್ಲಿ ಎ3 ಆರೋಪಿಯಾಗಿರುವ ಮಲ್ಲಿಕಾರ್ಜುನಸ್ವಾಮಿ ಹಾಗೂ ಎ4 ಆರೋಪಿಯಾಗಿರುವ ಜಮೀನಿನ ಮಾಲೀಕ ದೇವರಾಜು ಅವರಿಗೆ ಲೋಕಾಯುಕ್ತ ಪೊಲೀಸರು ನಾಳೆ(ಅ.10) ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಮುಡಾ ಪ್ರಕರಣದಲ್ಲಿ 50:50 ಅನುಪಾತದ 14 ಬದಲಿ ನಿವೇಶನಗಳಿಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೈಸೂರು ಲೋಕಾಯುಕ್ತರಿಗೆ ಆರೋಪಿಗಳ ಮೇಲೆ ಎಫ್‌ಐಆರ್ ದಾಖಲಿಸುವಂತೆ ಆದೇಶ ನೀಡಲಾಗಿತ್ತು. ಇದರಲ್ಲಿ ಎ1 ಆರೋಪಿ ಸಿಎಂ ಸಿದ್ದರಾಮಯ್ಯ, ಎ2 ಪಾರ್ವತಿ ಸಿದ್ದರಾಮಯ್ಯ ಅವರಾಗಿದ್ದಾರೆ.