ನಮ್ಮ ಮೈಸೂರ ದಸರಾ 2024

ಮುಡಾ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೆ ನೋಟಿಸ್‌

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಆದೇಶದ ನಂತರ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಇಬ್ಬರು ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ.

ಈ ಪ್ರಕರಣದಲ್ಲಿ ಎ3 ಆರೋಪಿಯಾಗಿರುವ ಮಲ್ಲಿಕಾರ್ಜುನಸ್ವಾಮಿ ಹಾಗೂ ಎ4 ಆರೋಪಿಯಾಗಿರುವ ಜಮೀನಿನ ಮಾಲೀಕ ದೇವರಾಜು ಅವರಿಗೆ ಲೋಕಾಯುಕ್ತ ಪೊಲೀಸರು ನಾಳೆ(ಅ.10) ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಮುಡಾ ಪ್ರಕರಣದಲ್ಲಿ 50:50 ಅನುಪಾತದ 14 ಬದಲಿ ನಿವೇಶನಗಳಿಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೈಸೂರು ಲೋಕಾಯುಕ್ತರಿಗೆ ಆರೋಪಿಗಳ ಮೇಲೆ ಎಫ್‌ಐಆರ್‌ ದಾಖಲಿಸುವಂತೆ ಆದೇಶ ನೀಡಲಾಗಿತ್ತು. ಇದರಲ್ಲಿ ಎ1 ಆರೋಪಿ ಸಿಎಂ ಸಿದ್ದರಾಮಯ್ಯ, ಎ2 ಪಾರ್ವತಿ ಸಿದ್ದರಾಮಯ್ಯ ಅವರಾಗಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿದ್ದರಾಮಯ್ಯ ಬ್ಲ್ಯಾಕ್‌ಮೇಲ್‌ಗೆಂದೇ ಸ್ಟಿಂಗ್ ಆಪರೇಷನ್! ಕಾಂಗ್ರೆಸ್‌ನವರೂ ಶಾಮೀಲು: ಯತೀಂದ್ರ ಸ್ಫೋಟಕ ಆರೋಪ

ಮೈಸೂರು: ಕರ್ನಾಟಕ ರಾಜಕೀಯದಲ್ಲಿ ಇದೀಗ ಸ್ಟಿಂಗ್ ಆಪರೇಷನ್ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬ್ಲ್ಯಾಕ್‌ಮೇಲ್ ಮಾಡುವ…

16 hours ago

ಬ್ರಿಕ್ಸ್‌ ಸಭೆಗಾಗಿ ಭಾರತಕ್ಕೆ ಬರಲಿದ್ದಾರೆ ಇರಾನ್‌ ಸಂಸತ್‌ ಸ್ಪೀಕರ್‌ ಘಾಲಿಬಾಫ್‌

ನವದೆಹಲಿ: ಇರಾನ್‌ ಸಂಸತ್‌ ಸ್ಪೀಕರ್‌ ಮೊಹಮ್ಮದ್‌ ಬಾಘೇರ್‌ ಘಾಲಿಬಾಫ್‌ ಅವರು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್‌ 26 ಮತ್ತು 27ರಂದು…

21 hours ago

ಶೇ.70ರಷ್ಟು ಅಂತರ್ಜಲ ಬಳಕೆ: ಮತ್ತಷ್ಟು ಜಲಸಂಕಷ್ಟದ ಆತಂಕ!

ಬೆಂಗಳೂರು: ರಾಜ್ಯದಲ್ಲಿ ಅಂತರ್ಜಲದ ಬಳಕೆ ಶೇಕಡಾ 70ರಷ್ಟಾಗಿದ್ದು, ಅಂತರ್ಜಲ ಮಟ್ಟ ಮತ್ತಷ್ಟು ಕುಸಿಯುವ ಆತಂಕ ಎದುರಾಗಿದೆ. ಕುಡಿಯುವ ನೀರು, ಕೃಷಿ…

21 hours ago

ರಾಜ್ಯದಲ್ಲಿ ಚುರುಕುಗೊಂಡ ಹಿಂಗಾರು ಮಳೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಕೃಷಿ ಚಟುವಟಿಕೆಗಳಿಗೆ ಮಳೆ ಮತ್ತೊಮ್ಮೆ ಮಹತ್ವ ಪಡೆದುಕೊಂಡಿದೆ. ಹಿಂಗಾರು ಬೆಳೆಗಳ ಬಿತ್ತನೆಗೆ ಸಿದ್ಧತೆ ನಡೆಸುತ್ತಿರುವ…

21 hours ago

ನೇಪಾಳ ಪ್ರವಾಹದ ನೆನಪು ಮಾಸುವ ಮುನ್ನವೇ ಟಿಬೆಟ್‌ನಲ್ಲಿ ಪ್ರಬಲ ಭೂಕಂಪ

ಲಾಸಾ: ನೇಪಾಳ–ಟಿಬೆಟ್ ಗಡಿಯಲ್ಲಿ ಸಂಭವಿಸಿದ್ದ ಭೀಕರ ಪ್ರವಾಹದ ನೆನಪು ಮಾಸುವ ಮುನ್ನವೇ ಟಿಬೆಟ್‌ನಲ್ಲಿ ಮತ್ತೊಂದು ನೈಸರ್ಗಿಕ ವಿಕೋಪ ಸಂಭವಿಸಿದೆ. ಅಕ್ಟೋಬರ್…

22 hours ago

ಇಸ್ರೇಲ್ ಸ್ವಾತಂತ್ರ್ಯೋತ್ಸವದ ಜ್ಯೋತಿ ಬೆಳಗಿಸಲು ಮೋದಿ–ಸ್ಮಿತ್ ಮಚ್ಚಾರ್‌ಗೆ ನೆತನ್ಯಾಹು ಆಹ್ವಾನ!

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರನ್ನು ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಯ…

22 hours ago