ನಮ್ಮ ಮೈಸೂರ ದಸರಾ 2024

ಮೈಸೂರು: ನಂದಿನಿ ಉತ್ಪನ್ನದಲ್ಲಿ ಶೇ.10ರಷ್ಟು ರಿಯಾಯಿತಿ

ವಸ್ತು ಪ್ರದರ್ಶನದಲ್ಲಿ ಮೈಮುಲ್ ಮಳಿಗೆ ಉದ್ಘಾಟಿಸಿ ಮೈಮುಲ್‌ ಅಧ್ಯಕ್ಷ ಆರ್.ಚೆಲುವರಾಜ್ ಕರೆ

ಮೈಸೂರು: ಈ ಬಾರಿ ನಾಡಹಬ್ಬ ದಸರೆಗೆ ಮೈಮುಲ್ ನಿಂದ ಶೇ.10 ರಷ್ಟು ರಿಯಾಯಿತಿ ದರದಲ್ಲಿ ಉತ್ಪನ್ನಗಳ ಮಾರಾಟ ಮಾಡುವುದಾಗಿ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಅಧ್ಯಕ್ಷ ಆರ್. ಚೆಲುವರಾಜು ಹೇಳಿದರು.

ನಗರದ ದಸರ ವಸ್ತು ಪ್ರದರ್ಶನ ಆವರಣದಲ್ಲಿ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು, ಒಕ್ಕೂಟ ಜನರಿಗೆ ಹೊಸ ಆಫರ್ ನೀಡುವ ಉದ್ದೇಶದಿಂದ ದಸರೆಯಲ್ಲಿ‌ ಶೇ.10 ರಷ್ಟು ರಿಯಾಯಿತಿ ದರದಲ್ಲಿ ನಂದಿನಿ ಹಾಲಿನ ಉತ್ಪನ್ನಗಳ ಮಾರಾಟಕ್ಕೆ ನಿರ್ಧರಿಸಲಾಗಿದೆ ಎಂದು ಹೇಳಿದರು.

ಶೀಘ್ರ ಚಾಕಲೆಟ್

ಮೈಮುಲ್ ಉತ್ಪನ್ನಗಳ ಮಾರಾಟ ಹೆಚ್ಚಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಚಾಕೂಲೆಟ್, ಪನ್ನೀರ್ ಗಳನ್ನು ಸಹ ತಯಾರು ಮಾಡುವ ಯೋಜನೆ ಬಗ್ಗೆ ಚಿಂತನೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಡಿಪಿಆರ್ ಸರ್ಕಾರಕ್ಕೆ ಸಲ್ಲಿಸಲಾಗುವುದು. ಇನ್ನೂ ಪ್ರಸ್ತುತ ಮೈಮುಲ್ ಡೇರಿಯಲ್ಲಿ ಬರೋಬ್ಬರಿ 9 ಲಕ್ಷ ಲೀಟರ್ ಹಾಲು ಸಂಗ್ರಹಿಸಲಾಗುತ್ತಿದ್ದು, ಇದರಲ್ಲಿ 4 ಲಕ್ಷ ಲೀಟರ್ ಹಾಲನ್ನು ಜನತೆ ಬಳಸುತ್ತಿದ್ದಾರೆ. ಉಳಿದ ಹಾಲನ್ನು ಪುಡಿ ಮಾಡಿ ಶೇಖರಿಸಿ ಉಪ ಉತ್ಪನ್ನಗಳನ್ನು ತಯಾರು ಮಾಡಲಾಗುತ್ತಿದೆ. ಹೀಗಾಗಿ ರೈತರ ಹಿತರ ದೃಷ್ಟಿಯಿಂದ ಚಾಕ್ ಲೆಟ್, ಪನ್ನೀರ್, ಚೀಸ್ ಸೇರಿ ಹಲವು ಉಪ ಉತ್ಪನ್ನಗಳ ತಯಾರಿಕೆಗೆ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಕೇರಳದಲ್ಲಿ 20 ಸಾವಿರ ಲೀಟರ್ ಹಾಲು ಮಾರಾಟ ಮಾಡುತ್ತಿದ್ದೇವೆ. ತಮಿಳುನಾಡಿನ ಚೆನೈ ನಲ್ಲಿ 50 ಲೀಟರ್ ಹಾಲು ಮಾರಾಟ ಮಾಡುತ್ತಿದ್ದು ಅವುಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತಷ್ಟು ಪ್ರಯತ್ನ ಮಾಡಲಾಗುವುದು ಎಂದರು.

ಐದು ದಶಕದ ಹಿಂದೆ ಪ್ರಾರಂಭಗೊಂಡ ಮೈಮುಲ್ ನಲ್ಲಿ ಈಗ 1205 ಸಂಘಗಳಾಗಿವೆ. 398 ಮಹಿಳಾ ಸಂಘಗಳಿವೆ. ರೈತರು ಇನ್ನೂ ಶೇ.25 ರಷ್ಟು ಪಾಲಿಸಿಯ ಮೊತ್ತ ಹಾಗೂ ಜಿಎಸ್ ಟಿ ಕಟ್ಟಬೇಕು. ಯಾವುದೇ ಕಾರಣಕ್ಕೂ ಹೆಚ್ಚಿನ ಮೊತ್ತ ಕಟ್ಟಬೇಡಿ ಎಂದರು.

ಇನ್ನೂ ನಮ್ಮೆಲ್ಲ ರೈತರು ಹಾಗೂ ಗ್ರಾಹಕರಿಗೆ ನವರಾತ್ರಿ ದಸರಾ ಹಬ್ಬದ ಶುಭಾಶಯಗಳು. ಮೈಸೂರು ನಂದಿನಿಯ ಉತ್ಪನ್ನಗಳಾದ ಪೇಡಾ, ಮೈಸೂರು ಪಾಕ, ಕೇಸರಿ ಪೇಡಾ, ಬರ್ಫಿ, ಗೋದಿ, ಲಾಡು ಹಾಗೂ ಕ್ಯಾಷೋ ಬರ್ಫಿ, ಮ್ಯಾಂಗೋ ಲಸ್ಸಿ ಇತರೆ ತಂಪು ಪಾನೀಯಗಳನ್ನು ಹೆಚ್ಚೆಚ್ಚು ಬಳಸಿ ಎಂದು ತಿಳಿಸಿದರು.

ಮೈಮುಲ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್.ಸುರೇಶ್ ನಾಯ್ಕ್, ಒಕ್ಕೂಟದ ನಿರ್ದೇಶಕರಾದ
ಎ.ಟಿ.ಸೋಮಶೇಖರ್, ಕೆ.ಜಿ.ಮಹೇಶ್, ಕೆ.ಊಮಾಶಂಕರ್, ಕೆ.ಈರೇಗೌಡ, ಸಿ.ಓಂಪ್ರಕಾಶ್, ಕೆ.ಎಸ್.ಕುಮಾರ್,
ಪಿ.ಎಂ.ಪ್ರಸನ್ನ, ಶ್ರೀಮತಿ ದ್ರಾಕ್ಷಾಯಣಿ ಬಸವರಾಜಪ್ಪ, ಶ್ರೀಮತಿ ಲೀಲಾ ಬಿ.ಕೆ.ನಾಗರಾಜು, ಶ್ರೀಮತಿ ಬಿ.ನೀಲಾಂಬಿಕೆ ಮಹೇಶ್ ಕುರಹಟ್ಟಿ, ಶ್ರೀಮತಿ ಎ.ಶಿವಗಾಮಿ ಷಣ್ಮುಗಂ, ಬಿ.ಎನ್. ಸದಾನಂದ, ಬಿ.ಗುರುಸ್ವಾಮಿ, ಬಿ.ಎ. ಪ್ರಕಾಶ್, ಶ್ರೀಮತಿ ಎ.ಬಿ. ಮಲ್ಲಿಕಾ ರವಿಕುಮಾರ್, ಸಿ.ಪ್ರಸಾದ್ ರೆಡ್ಡಿ, ಪಶುಸಂಗೋಪನ ಇಲಾಖೆ ಪ್ರತಿನಿಧಿ ಡಾ.ನಾಗರಾಜು, ಎಚ್.ಎಸ್.ಮಂಜುನಾಥ್, ರಾಷ್ಟ್ರೀಯ ಹೈನು ಅಭಿವೃದ್ಧಿ ಮಂಡಳಿ ಪ್ರತಿನಿಧಿ ರಜನಿ ತ್ರಿಪಾಠಿ ಇನ್ನಿತರರು ಉಪಸ್ಥಿತರಿದ್ದರು.

 

ನಂದಿನಿ ಉತ್ಪನ್ನ ನಮ್ಮೆಲ್ಲರ ಹೆಮ್ಮೆಯಾಗಿದೆ.‌ಇದರ ಬಳಕೆ ಬಗ್ಗೆ ಜಾಗೃತಿ ಮೂಡಿಸಲು ಮಳಿಗೆ ತೆರೆಯಲಾಗಿದೆ. ದೇಶದ ದುಬೈ ಸೇರಿ ಅನೇಕ ಕಡೆಗಳಲ್ಲಿ ಮಾರಾಟ ಮಾಡುತ್ತಿರುವುದು ಸಂತಸದ ವಿಚಾರ ಮತ್ತಷ್ಟು ಮಂದಿ‌ ಇದರ ಬಳಕೆ ಮಾಡುವ ಮೂಲಕ ನಮ್ಮ ರೈತರ ಜೀವನಕ್ಕೆ ನೆರವಾಗೋಣ.
– ಅಯೂಬ್ ಖಾನ್, ಅಧ್ಯಕ್ಷ ವಸ್ತು ಪ್ರದರ್ಶನ ಪ್ರಾಧಿಕಾರ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

40 mins ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

50 mins ago

ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌

ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

58 mins ago

ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…

1 hour ago

ಫಲಿತಾಂಶ ಯಶಸ್ವಿಗೊಳಿಸಲು ಶಾಲೆಯಲ್ಲೇ ವಾಸ್ತವ್ಯ ಹೂಡಿದ ಬಿಇಓ

ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…

2 hours ago

ದೊಡ್ಡಕವಲಂದೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿಗಳು: ಸಾಂಕ್ರಾಮಿಕ ರೋಗದ ಭೀತಿ

ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…

2 hours ago