Mysore
28
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ನೀಲಿ ಬಣ್ಣದ ರೇಷ್ಮೆ ಸೀರೆಯಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ ಉತ್ಸವ ಮೂರ್ತಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗುವ ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ನೀಲಿ ಬಣ್ಣದ ರೇಷ್ಮೆ ಸೀರೆ ಉಡಿಸಿ ಸಿಂಗರಿಸಲಾಗಿದೆ.

ಚಾಮುಂಡಿ ಉತ್ಸವ ಮೂರ್ತಿಯು ನೀಲಿ ಬಣ್ಣದ ರೇಷ್ಮೆ ಸೀರೆಯಲ್ಲಿ ಕಂಗೊಳಿಸುತ್ತಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಮೈಸೂರು ಅರಮನೆ ತಲುಪಲಿದೆ. ಚಾಮುಂಡಿ ಬೆಟ್ಟದಿಂದ ಉತ್ಸವ ಮೂರ್ತಿಯನ್ನು ಬೆಳ್ಳಿಯ ಪಲ್ಲಕ್ಕಿಯಲ್ಲಿ ಕೂರಿಸಿ ಮೆರವಣಿಗೆ ಮೂಲಕ ಕರೆತರಲಾಗುತ್ತಿದೆ.

ಬಳಿಕ ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿ ವಿರಾಜಮಾನಳಾಗಲಿದ್ದು, ಲಕ್ಷಾಂತರ ಮಂದಿಗೆ ದರ್ಶನ ನೀಡಲಿದ್ದಾಳೆ.

Tags: