ಮೈಸೂರು: ಮಲ್ಲಿಗೆ ನಗರಿ ಹಾಗೂ ಸಾಂಸ್ಕೃತಿಕ ನಗರಿ ಎಂದೇ ಕರೆಯಿಸಿಕೊಳ್ಳುವ ಮೈಸೂರಿನಲ್ಲಿ ನಡೆಯುತ್ತಿರುವ ದಸರಾ ಜಂಬೂಸವಾರಿ ಮೆರವಣಿಗೆಗೆ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಬಳಿಕ ಅರಮನೆಯಿಂದ ರಾಜಬೀದಿಯಲ್ಲಿ ತಾಯಿ ಚಾಮುಂಡೇಶ್ವರಿ ಆಸೀನಳಾಗಿರುವ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಗಜ ಗಾಂಭೀರ್ಯದ ಹೆಜ್ಜೆ ಹಾಕುತ್ತಿದ್ದಾನೆ.
5ನೇ ಬಾರಿಗೆ ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊತ್ತು ಸಾಗುತ್ತಿದ್ದು, ಇತರೆ ಆನೆಗಳು ಅಭಿಮನ್ಯುವಿಗೆ ಸಾಥ್ ನೀಡಿವೆ.
ಕುಮ್ಕಿ ಆನೆಗಳಾಗಿ ಹಿರಣ್ಯ ಹಾಗೂ ಲಕ್ಷ್ಮೀ, ನಿಶಾನೆಯಾಗಿ ಧನಂಜಯ, ಸಾಲಾನೆಗಳಾಗಿ ಗೋಪಿ, ಏಕಲವ್ಯ, ಪ್ರಶಾಂತ, ಮಹೇಂದ್ರ, ಸುಗ್ರೀವ, ಏಕಲವ್ಯ, ಕಂಜನ್ ಹಾಗೂ ಭೀಮ ಆನೆಗಳು ಜಂಬೂಸವಾರಿಯಲ್ಲಿ ಪಾಲ್ಗೊಂಡಿವೆ.
ರಾಜಬೀದಿಗಳಲ್ಲಿ ಜಂಬೂಸವಾರಿ ಮೆರವಣಿಗೆಯನ್ನು ಲಕ್ಷಾಂತರ ಜನರು ಕಣ್ತುಂಬಿಕೊಂಡಿದ್ದು, ಜಿಟಿ ಜಿಟಿ ಮಳೆಯ ನಡುವೆಯೂ ಜನರು ಜಂಬೂಸವಾರಿ ಮೆರವಣಿಗೆಯನ್ನು ನೋಡಿ ಖುಷಿಪಟ್ಟಿದ್ದಾರೆ.