ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಸಲ್ಲಿಸಿದರು.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ.
ದಸರಾ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ನಾಡದೇವತೆ ಚಾಮುಂಡೇಶ್ವರಿ ದೇವಿ ಉತ್ಸವ ಮೂರ್ತಿಯನ್ನು ಹೊತ್ತು ಸಾಗಿದನು. ಕ್ಯಾಪ್ಟನ್ ಅಭಿಮನ್ಯುಗೆ ಹಿರಣ್ಯ ಹಾಗೂ ಲಕ್ಷ್ಮೀ ಆನೆಗಳು ಕುಮ್ಕಿ ಆನೆಗಳಾಗಿ ಸಾಥ್ ನೀಡಿದವು.
ಬಳಿಕ ಅರಮನೆ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ಶಿವರಾಜ್ ತಂಗಡಿ, ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ, ಎಸ್ಪಿ ಸೀಮಾ ಲಾಟ್ಕರ್ ಅವರು ಶುಭ ಕುಂಭ ಲಗ್ನದಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿದರು.
ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಅರಮನೆ ವೇದಿಕೆಯತ್ತ ಬಂದು ನಿಂತ ಬಳಿಕ ಮೊದಲು ರಾಷ್ಟ್ರಗೀತೆಯನ್ನು ಮೊಳಗಿಸಲಾಯಿತು. ಆ ತಕ್ಷಣವೇ 21 ಸುತ್ತು ಕುಶಾಲತೋಪುಗಳನ್ನು ಸಿಡಿಸುವ ಮೂಲಕ ಗೌರವ ಸಮರ್ಪಿಸಲಾಯಿತು.
ಇದಾದ ಬಳಿಕ ಅರಮನೆಯಿಂದ ಬನ್ನಿಮಂಟಪಕ್ಕೆ ಜಂಬೂಸವಾರಿ ಮೆರವಣಿಗೆ ಸಾಗಿತು. ಜಂಬೂಸವಾರಿ ಮೆರವಣಿಗೆಯಲ್ಲಿ 51 ಸ್ತಬ್ಧಚಿತ್ರಗಳು ಸೇರಿದಂತೆ ವಿವಿಧ ಕಲಾತಂಡಗಳು ಭಾಗಿಯಾಗಿದ್ದವು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…