ನಮ್ಮ ಮೈಸೂರ ದಸರಾ 2024

ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆಗೆ ಪುಷ್ಪಾರ್ಚನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಸಲ್ಲಿಸಿದರು.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ.

ದಸರಾ ಗಜಪಡೆಯ ಕ್ಯಾಪ್ಟನ್‌ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ನಾಡದೇವತೆ ಚಾಮುಂಡೇಶ್ವರಿ ದೇವಿ ಉತ್ಸವ ಮೂರ್ತಿಯನ್ನು ಹೊತ್ತು ಸಾಗಿದನು. ಕ್ಯಾಪ್ಟನ್‌ ಅಭಿಮನ್ಯುಗೆ ಹಿರಣ್ಯ ಹಾಗೂ ಲಕ್ಷ್ಮೀ ಆನೆಗಳು ಕುಮ್ಕಿ ಆನೆಗಳಾಗಿ ಸಾಥ್‌ ನೀಡಿದವು.

ಬಳಿಕ ಅರಮನೆ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ಶಿವರಾಜ್‌ ತಂಗಡಿ, ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ, ಎಸ್ಪಿ ಸೀಮಾ ಲಾಟ್ಕರ್‌ ಅವರು ಶುಭ ಕುಂಭ ಲಗ್ನದಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿದರು.

ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಅರಮನೆ ವೇದಿಕೆಯತ್ತ ಬಂದು ನಿಂತ ಬಳಿಕ ಮೊದಲು ರಾಷ್ಟ್ರಗೀತೆಯನ್ನು ಮೊಳಗಿಸಲಾಯಿತು. ಆ ತಕ್ಷಣವೇ 21 ಸುತ್ತು ಕುಶಾಲತೋಪುಗಳನ್ನು ಸಿಡಿಸುವ ಮೂಲಕ ಗೌರವ ಸಮರ್ಪಿಸಲಾಯಿತು.

ಇದಾದ ಬಳಿಕ ಅರಮನೆಯಿಂದ ಬನ್ನಿಮಂಟಪಕ್ಕೆ ಜಂಬೂಸವಾರಿ ಮೆರವಣಿಗೆ ಸಾಗಿತು. ಜಂಬೂಸವಾರಿ ಮೆರವಣಿಗೆಯಲ್ಲಿ 51 ಸ್ತಬ್ಧಚಿತ್ರಗಳು ಸೇರಿದಂತೆ ವಿವಿಧ ಕಲಾತಂಡಗಳು ಭಾಗಿಯಾಗಿದ್ದವು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago