Mysore
24
mist

Social Media

ಗುರುವಾರ, 12 ಡಿಸೆಂಬರ್ 2024
Light
Dark

ಮಾವುತರು, ಕಾವಾಡಿಗರ ಕುಟುಂಬಕ್ಕೆ ಉಪಹಾರ ಕೂಟ ಏರ್ಪಡಿಸಿದ್ದ ಶೋಭಾ ಕರಂದ್ಲಾಜೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ.

ಇಂದು ಅರಮನೆ ಆವರಣಕ್ಕೆ ಭೇಟಿ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಮಾವುತರು ಹಾಗೂ ಕಾವಾಡಿಗರ ಕುಟುಂಬಕ್ಕೆ ಉಪಹಾರ ಕೂಡ ಏರ್ಪಡಿಸಿದ್ದರು.

ಪ್ರತಿ ವರ್ಷದಂತೆ ಈ ವರ್ಷವೂ ಮಾವುತರು ಹಾಗೂ ಕಾವಾಡಿಗರ ಕುಟುಂಬಕ್ಕೆ ಉಪಹಾರ ಆಯೋಜನೆ ಮಾಡಿದ್ದು, ಶೋಭಾ ಕರಂದ್ಲಾಜೆ ಅವರೇ ಸ್ವತಃ ಉಪಹಾರ ಬಡಿಸಿದರು.

ಈ ವೇಳೆ ಶಾಸಕ ಶ್ರೀವತ್ಸ, ಮಾಜಿ ಸಂಸದ ಪ್ರತಾಪ್‌ ಸಿಂಹ ಸೇರಿದಂತೆ ಹಲವು ಬಿಜೆಪಿ ಮುಖಂಡರು ಸಾಥ್‌ ನೀಡಿದರು.

ಬಳಿಕ ಮಾತನಾಡಿದ ಶೋಭಾ ಕರಂದ್ಲಾಜೆ ಅವರು, ಪ್ರತಿ ವರ್ಷದಂತೆ ಈ ವರ್ಷವೂ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದೇನೆ. ಅದೇ ರೀತಿ ಕಾವಾಡಿಗರು ಹಾಗೂ ಮಾವುತರ ಕುಟುಂಬಕ್ಕೆ ಉಪಹಾರ ಬಡಿಸಿದ್ದೇನೆ ಎಂದು ಖುಷಿಪಟ್ಟರು.

Tags: