ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಪಾರಂಪರಿಕ ಜಾವಾ ಮೋಟರ್ ಬೈಕ್ ಸವಾರಿಗೆ ಇಂದು ಚಾಲನೆ ನೀಡಲಾಯಿತು. ಮೈಸೂರು ನಗರದ ಪುರಭವನ ವೃತ್ತದಿಂದ ಬೈಕ್ ಸವಾರರಿಗೆ ಪ್ರಾದೇಶಿಕ ಆಯುಕ್ತ ರಮೇಶ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತ ರಮೇಶ್ ಮಾತನಾಡಿ, ಜನಸಾಮಾನ್ಯರಿಗೆ ನಗರದ ಪಾರಂಪರಿಕ ಕಟ್ಟಡಗಳ ಪರಿಚಯ ಮಾಡಿಕೊಡುವುದು ಇದರ ಪ್ರಮುಖ ಉದ್ದೇಶವಾಗಿದೆ. ಪಾರಂಪಾರಿಕ ಇಲಾಖೆ ಮತ್ತು ಪುರಾತತ್ವ ಸಂಗ್ರಹಾಲಯ ಇಲಾಖೆ ಜಾವಾ ಬೈಕ್ ಜಾಥಾವನ್ನು ಇಂದು ಪರಿಚಯಿಸಿದೆ. ಈ ಕಾರ್ಯಕ್ರಮದಲ್ಲಿ 80ಕ್ಕೂ ಹೆಚ್ಚು ಸವಾರರು ಭಾಗವಹಿಸಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಜಾವಾ ಬೈಕ್ ಮೂಲಕ ಸವಾರಿ ಸಾಗಲಿದೆ ಎಂದು ತಿಳಿಸಿದರು.
ಜಾವಾ ಮೋಟಾರ್ ಬೈಕ್ ಸವಾರಿಯ ಪುರಭವನದಿದ ಹೊರಟು ದೊಡ್ಡ ಗಡಿಯಾರ, ಚಾಮರಾಜ ಒಡೆಯರ್ ವೃತ್ತ, ಕೆ.ಆರ್.ಸರ್ಕಲ್, ಬನುಮಯ್ಯ ಕಾಲೇಜು, ಕಾಡಾ ಕಚೇರಿ, ಹಾರ್ಡಿಂಜ್ ಸರ್ಕಲ್, ಎಸ್‌ಐಆರ್‌ಡಿ, ಲಲಿತಮಹಲ್ ಟೆರಿಷಿಯನ್ ಕಾಲೇಜು, ಪಿ.ಟಿ.ಸರ್ಕಲ್, ವಸಂತ ಮಹಲ್ ಮತ್ತು ಪುರಾತತ್ವ ಇಲಾಖೆಯನ್ನು ತಲುಪಿತು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…