Mysore
24
mist

Social Media

ಶುಕ್ರವಾರ, 14 ನವೆಂಬರ್ 2025
Light
Dark

ಮೈಸೂರಿಗೆ ಯೋಗ ನಗರಿ ಎಂಬ ಹಿರಿಮೆಯಿದೆ: ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು: ಮೈಸೂರಿನ ಯೋಗಕ್ಕೆ ವಿಶ್ವ ಪರಂಪರೆ ಇದೆ. ಮೈಸೂರಿನ ಯೋಗ ವಿಶ್ವ ಪ್ರಸಿದ್ಧಿಯನ್ನು ಪಡೆದಿದ್ದು, ಎಲ್ಲಾ ವಯೋಮಾನದವರು ಯೋಗದಲ್ಲಿ ತೊಡಗಿಸಿಕೊಳ್ಳಬಹುದಾಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ.

ಇಂದು ಮೈಸೂರು ದಸರಾ ಅಂಗವಾಗಿ ಮೈಸೂರು ದಸರಾ ವಸ್ತು ಪ್ರದರ್ಶನದಲ್ಲಿನ ಪಿ. ಕಾಳಿಂಗರಾವ್ ಸಭಾಂಗಣದಲ್ಲಿ ಯೋಗ ದಸರಾ ಉಪ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ, ರಾಜ್ಯಮಟ್ಟದ ದಸರಾ ಯೋಗಾಸನ ಸ್ಪರ್ಧೆಯನ್ನು ಶಾಸಕ ಶ್ರೀವತ್ಸ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ರಾಜ್ಯಮಟ್ಟದಲ್ಲಿ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗದಲ್ಲಿ ಹೆಸರು ಮಾಡಿದವರು ಮೈಸೂರಿನಲ್ಲಿ ಯೋಗ ಕೇಂದ್ರಗಳನ್ನು ಸ್ಥಾಪನೆ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ದಸರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಲಾವಿದರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸಿ ಕಲಾವಿದರ ಪ್ರತಿಭೆಗೆ ಪ್ರೋತ್ಸಾಹ ನೀಡಲಾಗುತ್ತದೆ. ಅದೇ ರೀತಿಯಲ್ಲಿ ಇಂದು ಯೋಗಾಪಟುಗಳಿಗೆ ಯೋಗಾಸನ ಸ್ಪರ್ಧೆಯಲ್ಲಿ 2000 ಸಾವಿರಕ್ಕೂ ಅಧಿಕ ಯೋಗಪಟುಗಳು ಭಾಗವಹಿಸಿದ್ದರು. ಹಾಗೆಯೇ ವಿಶೇಷ ಚೇತನ ಮಕ್ಕಳು, ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ವಿವಿಧ ಆಸನಗಳನ್ನು ಪ್ರದರ್ಶಿಸಿ ಮೆಚ್ಚುಗೆ ಗಳಿಸಿದರು.

Tags:
error: Content is protected !!