ನಮ್ಮ ಮೈಸೂರ ದಸರಾ 2024

Mysuru dasara 2024: ಫಲಪುಷ್ಪ ಪ್ರದರ್ಶನದಲ್ಲಿ `ಕರ್ನಾಟಕ ಸಂಭ್ರಮ 50′ ʻಸರ್ಕಾರದ ಪಂಚ ಗ್ಯಾರಂಟಿʼ

ಮೈಸೂರು: ದಸರಾ ಮಹೋತ್ಸವದ ವಿಶೇಷ ಆಕರ್ಷಣೆಯಲ್ಲಿ ಒಂದಾದ ದಸರಾ ಫಲಪುಷ್ಪ ಪ್ರದರ್ಶನವು ಪ್ರವಾಸಿಗರ ಆಕರ್ಷಣೆ ಕೇಂದ್ರ ಬಿಂದುವಾಗಿದೆ.

ತೋಟಗಾರಿಕಾ ಇಲಾಖೆ ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಕುಪ್ಪಣ್ಣ ಉದ್ಯಾನವನದಲ್ಲಿ ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಫಲಪುಷ್ಪ ಪ್ರದರ್ಶನವನ್ನು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅಧಿಕೃತವಾಗಿ ಉದ್ಘಾಟಿಸಿದ್ದು, ಇಂದಿನಿಂದ ಅಧಿಕೃತ ವಿಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ಗಮನ ಸೆಳೆಯಲಿವೆ ಬೌದ್ಧ ಬೋಧನೆಗಳು
ಗಾಜಿನ ಮನೆಯೊಳಗೆ ನಿರ್ಮಿಸಿರುವ ಶಾಕ್ಯ ರಾಜಮನೆತನ ಬೌದ್ಧ ಬೋಧನೆಗಳು ಹಾಗೂ ಬಸವಣ್ಣನವರ ಶ್ರೇಷ್ಠತೆ ಸಾರುವ ಅನುಭವ ಮಂಟಪ, ಪ್ರಜಾಪ್ರಭುತ್ವದ ನೆಲೆಯಲ್ಲಿ ರೂಪಿಸಿರುವ ಸಂಸತ್ ಭವನವು ಪ್ರವಾಸಿಗಳ ಗಮನ ಸೆಳೆಯಲಿದೆ.

ಪಂಚ ಗ್ಯಾರಂಟಿ ಯೋಜನೆ
ಈ ಬಾರಿ ವಿಶೇಷವಾಗಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಯುವನಿಧಿ, ಗೃಹಜ್ಯೋತಿ, ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮೀ ಯೋಜನೆಗಳ ವಿಷಯಾಧಾರಿತವಾದ ಪುಷ್ಪ ಕಲಾಕೃತಿ ಮಾದರಿಗಳನ್ನು ಪ್ರೇಕ್ಷಕರು ನೋಡಬಹುದಾಗಿದೆ.

ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ಮೈಸೂರು ರಾಜ್ಯದಲ್ಲಾದ ಭದ್ರಾವತಿ ಕಾರ್ಖಾನೆ, ಶಿವನಸಮುದ್ರ ವಿದ್ಯುತ್ ಉತ್ಪಾದನೆ, ಮೈಸೂರು ವಿಶ್ವವಿದ್ಯಾಲಯ, ಹಾಗೂ ಮೈಸೂರು ಆಕಾಶವಾಣಿ ಸೇರಿದಂತೆ ಅಭಿವೃದ್ಧಿ ಸಾಧನೆಗಳ ಕುರಿತ ಪುಷ್ಪಗಳ ಮದ್ಯೆ ಇದ್ದ ಚಿತ್ರ ಪ್ರದರ್ಶನ ನೋಡುಗರನ್ನು ಆಕರ್ಷಿಸಲಿದೆ.

ಕರ್ನಾಟಕ ಸಂಭ್ರಮ
50 ಕುಪ್ಪಳ್ಳಿ ಪಾರ್ಕ್ನ ಮುಖ್ಯದ್ವಾರದಲ್ಲಿ ಇತ್ತೀಚಿಗೆ ಸಂಭ್ರಮಿಸಿದ ಕನ್ನಡಿಗರ ಹೆಮ್ಮೆಯ ಕರ್ನಾಟಕ ಸಂಭ್ರಮ:50 ರ ಕುರಿತು ಹಳದಿ ಮತ್ತು ಕೆಂಪು ಬಣ್ಣದ ಗುಲಾಬಿ ಹೂವಿನಿಂದ ನಿರ್ಮಿಸಲಾದ ಕರ್ನಾಟಕ ಭೂಪಟ, ಎಡ ಬಲದಲ್ಲಿ ಆನೆಯ ಮಾದರಿ, ಅಲ್ಲದೆ ಹೂವಿನಿಂದ ಅರಳಿದ ಟೀಮ್ ಇಂಡಿಯಾ ವಿಶ್ವಕಪ್ ಮಾದರಿಯು ಕ್ರೀಡಾಪ್ರಿಯರನ್ನು ಸೆಳೆಯಲಿದೆ.

ಈ ಬಾರಿ ಭಾರತದ ಮೊದಲ ಮಹಿಳಾ ಶಿಕ್ಷಕಿ, ಹೆಣ್ಣು ಮಕ್ಕಳಿಗೆ ಶಿಕ್ಷಣ ಕ್ರಾಂತಿಯ ಬಗ್ಗೆ ಬೆಳಕು ಚೆಲ್ಲಿದ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ, ಒಂದೇ ಮಾನವನ ದೇಹದಲ್ಲಿ ಅರ್ಧಭಾಗ ರೈತ ಇನ್ನರ್ಧ ಭಾಗ ಗಡಿ ಕಾಯುವ ಸೈನಿಕನ ಮಾದರಿ ಬಹಳ ವಿಶೇಷವಾಗಿದೆ.

ಹುಲಿಯನ್ನೇರಿದ ಮಹದೇಶ್ವರ ಸ್ವಾಮಿಯ ಪ್ರತಿಮೆ ಹಾಗೂ ಒಂದೇ ಗೋಪುರದಲ್ಲಿ ಅರಳಿದ ಕರ್ನಾಟಕದ ಅತೀ ದೊಡ್ಡ ದೇವಾಲಯವಾದ ನಂಜನಗೂಡಿನ ಶ್ರೀಕಂಟೇಶ್ವರ ಹಾಗೂ ಶ್ರೀ ಚಾಮುಂಡೇಶ್ವರಿ ದೇವಾಲಯವನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿರುವುದು ಭಕ್ತಿಪ್ರಿಯರನ್ನು ಕೈ ಬೀಸಿ ಕರೆಯುತ್ತದೆ.

ಜನಮನಸೂರೆಗೊಳ್ಳುವಂಥ ಸುಮಾರು ವಿಭಿನ್ನ ಥೀಮ್ನೊಂದಿಗೆ ಈ ಬಾರಿಯ ಫಲಪುಷ್ಪ ಪ್ರದರ್ಶನ ಸಜ್ಜಾಗಿದ್ದು, ಅಲ್ಲದೆ ಫಲಪುಷ್ಪ ಪ್ರದರ್ಶನಕ್ಕೆ ಬಂದಂತಹ ಪ್ರೇಕ್ಷಕರಿಗೆ ವಿವಿಧ ರೀತಿಯ ತಿಂಡಿ ತಿನಿಸುಗಳು, ಆಟಿಕೆಗಳ ವ್ಯವಸ್ಥೆ ಹಾಗೂ ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಮಳಿಗೆಗಳನ್ನು ತೆರೆಯಲಾಗಿದೆ.

ಪ್ರದರ್ಶನದಲ್ಲಿ ವೈವಿಧ್ಯಮಯ ಹೂವುಗಳಲ್ಲಿ ಆಫ್ರಿಕನ್ ಮಾರಿಗೋಲ್ಡ್, ಹಳದಿ, ಆರ್ಕಿಡ್ಗಳು, ಸೆಲೋಸಿಯಾ, ಕಾರ್ನೇಷನ್, ಆಂಥೂರಿಯಂ, ಗರ್ಬೆರಾ, ರೋಸಸ್, ಕಾಸ್ಮೊಸ್, ಬ್ಲೂಡೈಸಿ, ಪಿಂಗ್ ಪಾಂಗ್, ಪೆಟುನಿಯಾ, ಟೊರೆನಿಯಾ, ಡ್ರಾಕೇನಾ, ಟಿಥೋನಿಯಾ , ಜಿನ್ನಿಯಾ ಎಂಬಂತೆ ನಾನಾ ಬಗೆಯ ಹೂವುಗಳನ್ನು ಹೇರಳವಾಗಿ ಬಳಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…

7 mins ago

ಓದುಗರ ಪತ್ರ: ಅದಲು-ಬದಲು…!

ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…

9 mins ago

ಓದುಗರ ಪತ್ರ:  ಚರಂಡಿಯಲ್ಲಿ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…

42 mins ago

ಓದುಗರ ಪತ್ರ:  ಸಾರ್ವಜನಿಕ ಶೌಚಾಲಯಗಳ ಬೀಗ ತೆರೆಯಿರಿ

ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…

55 mins ago

ಓದುಗರ ಪತ್ರ: ಅನಗತ್ಯ ಸಿಸೇರಿಯನ್: ಆಸ್ಪತ್ರೆಗಳ ವಿರುದ್ಧ ಕ್ರಮ ಸ್ವಾಗತಾರ್ಹ

ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…

1 hour ago

ಪಂಜು ಗಂಗೊಳ್ಳಿ ವಾರದ ಅಂಕಣ: ವಿಕಲಾಂಗರ ಬದುಕಿಗೆ ಚಲನೆ ನೀಡುವ ಸಂದೀಪ್ ತಲ್ವಾರ್

ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…

2 hours ago