ನಮ್ಮ ಮೈಸೂರ ದಸರಾ 2024

ಮಕ್ಕಳ ದಸರಾಗೆ ಚಾಲನೆ: ವಿವಿಧ ವೇಷಭೂಷಣ ತೊಟ್ಟು ರಂಜಿಸಿದ ಚಿಣ್ಣರು

ಮೈಸೂರು:  ರಾಜಕುಮಾರ ವೇಷ ಭೂಷಣ ತೊಟ್ಟ ಚಿಣ್ಣರು, ಚಾಮುಂಡಿ, ದುರ್ಗಿ ಹಾಡಿಗೆ ನೃತ್ಯ ಮಾಡಿ ಸಂಭ್ರಮಿಸಿದರು.  ಹುಲಿ ಕುಣಿತ, ಗೊಂಬೆ ಕುಣಿತ, ಯಕ್ಷಗಾನ, ಜನಪದ ನೃತ್ಯ, ಕಂಸಾಳೆ, ಡೊಳ್ಳು ಕುಣಿತ, ಗಾಯನ ಹೀಗೆ ನಾನಾ ಕಲಾ ಪ್ರತಿಭೆಯನ್ನು ಪ್ರದರ್ಶಿಸಿ ಮೆಚ್ಚುಗೆಗೆ ಪಾತ್ರರಾದರು.

ಇದು… ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ದಸರಾ ಉಪ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ, ಮಕ್ಕಳ ದಸರಾ ಕಲಾಥಾನ್ ನಲ್ಲಿ ಕಂಡು ಬಂದವು. ಸಮಾಜ ಕಲ್ಯಾಣ  ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಮಕ್ಕಳ ದಸರಾಗೆ ಅದ್ದೂರಿಯಾಗಿ ಚಾಲನೆ ನೀಡಿದರು.

ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ದೇವರಾಜ ಅರಸು ರಸ್ತೆ ಮಾರ್ಗವಾಗಿ ಮಹಾರಾಜ ಸರ್ಕಾರಿ ಪ್ರೌಢಶಾಲೆವರೆಗೆ, ಮಕ್ಕಳಿಗಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸುಮಾರು 1 ಸಾವಿರಕ್ಕೂ ಹೆಚ್ಚು ಶಾಲಾ ಮಕ್ಕಳು ವಿವಿಧ ಬಗೆಯ ಸಾಂಸ್ಕೃತಿಕ, ಜಾನಪದ, ಮಹನೀಯರ ವೇಷ ಭೂಷಣ ತೊಟ್ಟು ಗಾಂಭೀರ್ಯದಿಂದ ಹೆಜ್ಜೆ ಹಾಕಿದರು.

ಶಾಲಾ ಮಕ್ಕಳು ನಾಡಿನ ಕಲೆ ಸಂಸ್ಕೃತಿ ಸಾರುವ ವೇಶ ಭೂಷಣಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿದರು.

ಮಕ್ಕಳ ದಸರಾ ಕಾರ್ಯಕ್ರಮಕ್ಕೆ ಸರ್ಕಾರಿ ಪ್ರಾಥಮಿಕ ಶಾಲೆ ಶಿವರಾಂಪುರ, ಪ್ರೌಢಶಾಲೆ ಕೆ.ಆರ್. ನಗರ, ಸೇಂಟ್ ಜೋಸೆಫ್ ಹುಣಸೂರು, ಸರ್ಕಾರಿ ಪ್ರೌಢಶಾಲೆ ಮೈಸೂರು ಉತ್ತರ ಸೇರಿದಂತೆ ಜಿಲ್ಲೆಯ ನಾನಾ ಭಾಗಗಳಿಂದ ಸ್ವರ್ಧೆಯಲ್ಲಿ ಭಾಗವಹಿಸಲು ಮಕ್ಕಳು ಆಗಮಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕರ್ನಾಟಕದಲ್ಲಿ ಉದ್ಯೋಗ ಸೃಷ್ಠಿ | ರಾಹುಲ್‌ ಗಾಂಧಿ ಹಾಗೂ ಅಶ್ವಿನ್‌ ವೈಷ್ಣವ್‌ ನಡುವೆ ಟ್ವಿಟ್‌ ವಾರ್…

ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…

28 mins ago

ಚಿತ್ರದುರ್ಗ ಬಸ್‌ ದುರಂತ | ಶಾಲಾ ಮಕ್ಕಳಿದ್ದ ಮತ್ತೊಂದು ಬಸ್ಸಿಗೂ ಬೆಂಕಿ : ಕೂದಲೆಳೆ ಅಂತರದಲ್ಲಿ ಪವಾಡಸದೃಶ ಪಾರು!

ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…

46 mins ago

ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…

2 hours ago

ನಾಳೆ ದೆಹಲಿಗೆ ತೆರಳಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್‌.27ರಂದು ದೆಹಲಿಯ ಇಂದಿರಾ…

2 hours ago

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…

3 hours ago

ರಾಜ್ಯದಲ್ಲಿ ಬೆಳಗಿನ ವೇಳೆ ದಟ್ಟ ಮಂಜು: ಹವಾಮಾನ ತಜ್ಞರು ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…

3 hours ago