ನಮ್ಮ ಮೈಸೂರ ದಸರಾ 2024

ಸಾಂಸ್ಕೃತಿಕ ನಗರಿಯ ಅಂದ ಹೆಚ್ಚಿಸಿದ ದೀಪಾಲಂಕಾರ: 21 ದಿನಗಳ ಕಾಲ ಕಂಗೊಳಿಸಲಿದೆ ಮೈಸೂರು

ದಸರಾ ದೀಪಾಲಂಕಾರಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ
ಮೈಸೂರು: ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ಚಾಲನೆ ನೀಡಿದರು.

ನಗರದ ಸಯ್ಯಾಜಿರಾವ್‌ ರಸ್ತೆಯಲ್ಲಿನ ಹಸಿರು ಚಪ್ಪರದ ಆವರಣದಲ್ಲಿ ಗುರುವಾರ ಸಂಜೆ ನಡೆದ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಸರಾ ವಿದ್ಯುತ್‌ ದೀಪಾಲಂಕಾರ ಹಾಗೂ “ಪವರ್‌ ಮ್ಯಾನ್‌”ಗಳ ಕರ್ತವ್ಯದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈ ಬಾರಿ ರೂಪಿಸಲಾಗಿರುವ ವಿದ್ಯುತ್‌ ರಥಕ್ಕೂ ವಿದ್ಯುಕ್ತ ಚಾಲನೆ ನೀಡಿದರು.

ಪ್ರತಿ ವರ್ಷದಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ(ಸೆಸ್ಕ್‌)ದಿಂದ ದಸರಾ ದೀಪಾಲಂಕಾರ ಮಾಡಲಾಗಿದ್ದು, ಹಿಂದಿನ ವರ್ಷಗಳಿಗಿಂತ ಈ ಬಾರಿಯ ದೀಪಾಲಂಕಾರ ಇನ್ನಷ್ಟು ಆಕರ್ಷಕವಾಗಿದ್ದು, ವಿದ್ಯುತ್‌ ಬೆಳಕಿನಲ್ಲಿ ಅರಮನೆ ನಗರಿಯನ್ನು ವೀಕ್ಷಿಸಲು ಜನ ಸಾಗರವೇ ಹರಿದು ಬರುತ್ತದೆ.

130 ಕಿಮೀ ರಸ್ತೆಗೆ ದೀಪಾಲಂಕಾರ
ಈ ಬಾರಿ ಮೈಸೂರು ನಗರದ 130 ಕಿ.ಮೀ ವ್ಯಾಪ್ತಿಯ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಾಡಲಾಗಿದೆ. ಅರಮನೆ ಸುತ್ತಲಿನ ರಸ್ತೆಗಳು ಸೇರಿದಂತೆ ಸಯ್ಯಾಜಿರಾವ್‌ ರಸ್ತೆ, ಬಿಎನ್‌ ರಸ್ತೆ, ಇರ್ವಿನ್ ರಸ್ತೆ, ಅಲ್ಬರ್ಟ್‌ ವಿಕ್ಟರ್‌ ರಸ್ತೆ, ಜೆಎಲ್‌ಬಿ ರಸ್ತೆ, ಚಾಮರಾಜ ಜೋಡಿ ರಸ್ತೆ, ಹೊರ ವಲಯದಲ್ಲಿನ ಪ್ರಮುಖ ಹೆದ್ದಾರಿಗಳಿಗೂ ದೀಪಾಲಂಕಾರ ಮಾಡಲಾಗಿದೆ. ಜತೆಗೆ ನಗರ ವ್ಯಾಪ್ತಿಯಲ್ಲಿರುವ ಪ್ರಮುಖ ವೃತ್ತಗಳಿಗೂ ಆಕರ್ಷಕ ದೀಪಾಲಂಕಾರ ಮಾಡಲಾಗಿದೆ. ಇದಲ್ಲದೆ ನಗರದ ದೊಡ್ಡಕೆರೆ ಮೈದಾನ, ಕೆ.ಆರ್‌.ವೃತ್ತ, ಚಾಮರಾಜ ವೃತ್ತ, ಜಯಚಾಮರಾಜ ವೃತ್ತ(ಹಾರ್ಡಿಂಜ್‌), ರಾಮಸ್ವಾಮಿ ವೃತ್ತ, ರೈಲ್ವೆ ನಿಲ್ದಾಣ ಸಮೀಪ, ಗನ್‌ಹೌಸ್‌, ಎಲ್‌ಐಸಿ ವೃತ್ತ ಸೇರಿದಂತೆ ವಿವಿಧೆಡೆ ವಿದ್ಯುತ್‌ ದೀಪಗಳಿಂದಲೇ 65ಕ್ಕೂ ಹೆಚ್ಚು ಕಲಾಕೃತಿಗಳನ್ನು ನಿರ್ಮಿಸಲಾಗಿದೆ.

21 ದಿನಗಳ ಆಕರ್ಷಣೆ
ದಸರಾ ಹಿನ್ನೆಲೆಯಲ್ಲಿ ಮಾಡಲಾಗಿರುವ ವಿದ್ಯುತ್‌ ದೀಪಾಲಂಕಾರ ಈ ಬಾರಿ ಒಟ್ಟು 21 ದಿನಗಳ ಕಾಲ ನಡೆಯಲಿದೆ. ದಸರಾ ದೀಪಾಲಂಕಾರಕ್ಕೆ 6.50 ಕೋಟಿ ರೂ. ವೆಚ್ಚವಾಗುತ್ತಿದ್ದು, 2881 ಕಿ.ವ್ಯಾ ಅಂದಾಜು ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಭಾರ ಹಾಗೂ 242012 ಯೂನಿಟ್‌ಗಳ ವಿದ್ಯುತ್‌ ಬಳಕೆ ಮಾಡಲಾಗುತ್ತಿದೆ.

ಡ್ರೋನ್‌ ಶೋ ಮೆರಗು
“ದಸರಾ ದೀಪಾಲಂಕಾರದೊಂದಿಗೆ ಮೊದಲ ಬಾರಿಗೆ ಡ್ರೋನ್‌ ಪ್ರದರ್ಶನ ಏರ್ಪಡಿಸಲಾಗಿದೆ. ಎಲ್.ಇ.ಡಿ. ಬಲ್ಪ್‌ಗಳನ್ನು ಅಳವಡಿಸಿರುವ ಸುಮಾರು 1500 ಡೋನ್‌ಗಳನ್ನು ಬಳಸಿ ಆಕಾಶದಲ್ಲಿ ಅದ್ಭುತ ವಿನ್ಯಾಸಗಳನ್ನು ಮೂಡಿಸಲಾಗುವುದು. ಅಕ್ಟೋಬರ್‌ 6, 7ರಂದು ಹಾಗೂ 11, 12ರಂದು ರಾತ್ರಿ 8 ಗಂಟೆಯಿಂದ 8:15ರವರೆಗೆ ಡ್ರೋನ್‌ ಪ್ರದರ್ಶನ ನಡೆಯಲಿದ್ದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಅ.6 ಮತ್ತು 7ರಂದು ಡ್ರೋನ್‌ ಶೋ ವೀಕ್ಷಿಸಲು ಉಚಿತ ಪ್ರವೇಶವಿರುತ್ತದೆ.

ವಿದ್ಯುತ್‌ ರಥ ಸಂಚಾರ
ದಸರಾ ಸಂದರ್ಭದಲ್ಲಿ “ಪವರ್‌ ಮ್ಯಾನ್‌”ಗಳ ಕರ್ತವ್ಯ, ಗೃಹಜ್ಯೋತಿ, ಕೃಷಿ ಬಳಕೆಗೆ ಸೌರ ವಿದ್ಯುತ್, ವಿದ್ಯುತ್ ಸುರಕ್ಷತೆ ಹಾಗೂ ನುಡಿದಂತೆ ನಡೆದ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ವಿದ್ಯುತ್ ದೀಪಾಲಂಕಾರದಿಂದ ಅಲಂಕೃತಗೊಂಡ ವಿದ್ಯುತ್ ರಥವನ್ನು ರೂಪಿಸಲಾಗಿದೆ. ಈ ರಥ ದಸರಾ ಉತ್ಸವದ ದರ್ಭದಲ್ಲಿ ಮೈಸೂರಿನ ಪ್ರಮುಖ ಭಾಗಗಳಲ್ಲಿ ಸಂಚರಿಸಲಿದೆ.

ಸುರಕ್ಷತೆಗೆ ಆದ್ಯತೆ
ಈ ಬಾರಿಯ ವಿದ್ಯುತ್ ದೀಪಾಲಂಕಾರದಲ್ಲಿ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ವಿದ್ಯುತ್ ಅವಘಡಗಳು ಸಂಭವಿಸಿದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಎಂಎಲ್ಸಿಗಳಾದ ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಶಾಸಕರು ಹಾಗೂ ಸೆಸ್ಕ್ ನಿಗಮದ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಜಿ. ಶೀಲಾ, ತಾಂತ್ರಿಕ ವಿಭಾಗದ ನಿರ್ದೇಶಕ ಮುನಿಗೋಪಾಲ್ ರಾಜು ಇತರ ಅಧಿಕಾರಿಗಳು ಭಾಗವಹಿಸಿದ್ದರು.

“ಇತ್ತೀಚಿನ ದಿನಗಳಲ್ಲಿ ಸೆಸ್ಕ್ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ನಿಗಮದ ಎಲ್ಲ ಅಧಿಕಾರಿಗಳು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಗೃಹಜ್ಯೋತಿ ಸೇರಿದಂತೆ ಎಲ್ಲ ಭಾಗ್ಯಗಳು ಇದೇ ರೀತಿ ಮುಂದುವರಿಯಲಿದೆ. ಈ ಬಾರಿ ಆಕರ್ಷಕವಾಗಿ ದೀಪಾಲಂಕಾರ ಮಾಡಲಾಗಿದೆ”.
ಡಿ.ಕೆ. ಶಿವಕುಮಾರ್,ಉಪ ಮುಖ್ಯಮಂತ್ರಿ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

51 mins ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

1 hour ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

1 hour ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

2 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

2 hours ago

ಬೂದಿಪಡಗ ಆನೆ ಶಿಬಿರದಿಂದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…

2 hours ago