ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ.
ಈ ಹಿನ್ನೆಲೆಯಲ್ಲಿ ಜಂಬೂಸವಾರಿಯಲ್ಲಿ ನಂದಿಗೆ ಅಗ್ರ ಪೂಜೆ ಸಲ್ಲಿಕೆಯಾಗುತ್ತದೆ. ಅದರಂತೆ ಇಂದು ಶುಭ ಮಕರ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ನೆರವೇರಿಸಿದರು. ಬಳಿಕ ಈಡುಗಾಯಿ ಒಡೆದು ನಾಡಿನ ಜನತೆಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಅನೇಕ ಸಚಿವರು ಹಾಗೂ ಶಾಸಕರು ಭಾಗಿಯಾಗಿದ್ದರು.
ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯದ ಎದುರು ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ ಅವರು, ಜಂಬೂಸವಾರಿಗೆ ಅಧಿಕೃತ ಚಾಲನೆ ನೀಡಿದರು.