Mysore
24
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

ನಮ್ಮದು ರೈತ ಪರ ಸರ್ಕಾರ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಮೈಸೂರು: ನಮ್ಮ ಸರ್ಕಾರದಿಂದ ಕೃಷಿ ಕ್ಷೇತ್ರದ ಸುಧಾರಣೆಗೆ ಅತೀ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಮೈಸೂರಿನ ಜೆ.ಕೆ ಮೈದಾನದಲ್ಲಿ ಏರ್ಪಡಿಸಿರುವ ರೈತ ದಸರಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು, ಕೃಷಿ ಲಾಭದಾಯಕವಾಗಿಸುವುದೇ ರಾಜ್ಯ ಸರ್ಕಾರದ ಧ್ಯೇಯ. ಅದಕ್ಕಾಗಿ ಕೃಷಿ, ಪಶುಸಂಗೋಪನೆ, ತೋಟಗಾರಿಗೆ ರೇಷ್ಮೆ ಎಲ್ಲವನ್ನೂ ಒಟ್ಟುಗೂಡಿಸಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ ಎಂದರು.

ಹೈನುಗಾರಿಕೆ ಕುರಿ, ಕೋಳಿ, ಹಂದಿ, ಮೀನು, ಜೇನು ಸಾಕಾಣಿಕೆಗಳ ಬಗ್ಗೆಯೂ ಗಮನ ಹರಿಸಬೇಕು. ಆಗ ಹೆಚ್ಚಿನ ಆದಾಯ ಪಡೆಯಲು ಸಾಧ್ಯವಿದೆ ಎಂದು ಹೇಳಿದರು.

ಕೃಷಿಕರು ಸಾಂಪ್ರಾದಾಯಿಕ ಕೃಷಿ ಜೊತೆಗೆ ಸಮಗ್ರ ಬೇಸಾಯಕ್ಕೆ ಒತ್ತು ನೀಡಬೇಕು. ಬದಲಾಗುತ್ತಿರುವ ತಂತ್ರಜ್ಞಾನ ಹೊಸ ಆವಿಷ್ಕಾರಗಳನ್ನು ಅಳವಡಿಸಿಕೊಂಡು ಉತ್ಪಾದನೆಯ ಮೌಲ್ಯವರ್ಧನೆ ಮಾಡುವ ಮೂಲಕ ಹೆಚ್ಚಿನ ಲಾಭ ಗಳಿಸಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವರಾದ ವೆಂಕಟೇಶ್, ಚಾಮುಂಡೇಶ್ವರಿ ವಿದ್ಯುತ್ ಪ್ರಸರಣ ನಿಗಮದ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ,
ಶಾಸಕರಾದ ಹರೀಶ್ ಗೌಡ ಸೇರಿದಂತೆ ಮತ್ತಿತರರು ಹಾಜರಿದ್ದರು. ಇದೇ ವೇಳೆ ರೈತ ಸಾಧಕರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

Tags:
error: Content is protected !!