ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಕ್ಷಣಗಣನೆ ಆರಂಭವಾಗಿದ್ದು, ಆನೆಗಳಿಗೆ ಬಣ್ಣದ ಅಲಂಕಾರ ಮಾಡಲಾಗಿದೆ.
ಹುಣಸೂರು ಮೂಲದ ಒಟ್ಟು 8 ಕಲಾವಿದರು ದಸರಾ ಆನೆಗಳಿಗೆ ವಿಶೇಷ ಬಣ್ಣದ ಅಲಂಕಾರವನ್ನು ಮಾಡಿದ್ದಾರೆ.
ಆನೆಗಳ ಕಿವಿ ಮೇಲೆ ಶಂಖ, ಚಕ್ರ, ಸೊಂಡಿಲ ಮೇಲೆ ಗಂಡಭೇರುಂಡ, ಹೂವು, ಎಲೆ, ಬಳ್ಳಿ, ದಂತದ ಹಿಂಭಾಗ ಗಿಳಿ, ಎಲೆ, ಕೆನ್ನೆಯ ಮೇಲೆ ಹೂವು, ಬಳ್ಳಿ, ಮೊಗ್ಗು, ಎಲೆ ಹಾಗೂ ಕಾಲುಗಳ ಮೇಲೆ ಪಕ್ಷಿಯ ಚಿತ್ರವನ್ನು ಬಿಡಿಸಲಾಗಿದೆ.
ಇನ್ನು ಆನೆಯ ಕಣ್ಣಿನ ಸುತ್ತ ಎಲೆ ಆಕೃತಿ, ಹಣೆಯ ಮೇಲೆ ನಾಮ ಮತ್ತು ಸುರುಳಿ ಚಿತ್ರ ಬಿಡಿಸಿ ಆನೆಗಳಿಗೆ ಸಿಂಗಾರ ಮಾಡಲಾಗಿದ್ದು, ಮಧುವಣಗಿತ್ತಿಯಂತೆ ಕಂಗೊಳಿಸುತ್ತಿವೆ.