ನಮ್ಮ ಮೈಸೂರ ದಸರಾ 2024

ಜಂಬೂಸವಾರಿ ವೀಕ್ಷಣೆಗೆ ರಸ್ತೆ ಬದಿಗಳಲ್ಲಿ ಕಿಕ್ಕಿರಿದು ಸೇರಿದ ಜನತೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಕ್ಷಣನೆ ಆರಂಭವಾಗಿದ್ದು, ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಸಾವಿರಾರು ಮಂದಿ ರಸ್ತೆ ಬದಿಗಳಲ್ಲಿ ಕಿಕ್ಕಿರಿದು ಸೇರಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು, ಮಧ್ಯಾಹ್ನ 1.41 ರಿಂದ 2.10 ಗಂಟೆಯ ವೇಳೆಗೆ ಮಕರ ಲಗ್ನದಲ್ಲಿ ಜರುಗುವ ನಂದಿ ಕಂಬಕ್ಕೆ ಪೂಜೆ ಸಲ್ಲಿಸಿದ್ದು, ನಂತರ ಸಂಜೆ 4 ರಿಂದ 4.30 ಗಂಟೆಯೊಳಗೆ ಸಲ್ಲುವ ಕುಂಭ ಲಗ್ನದಲ್ಲಿ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.

ವಿಶ್ವವಿಖ್ಯಾತ ಜಂಬೂಸವಾರಿಯ ಸಲುವಾಗಿ ಅಭಿಮನ್ಯು ಆನೆ 750 ಕೆ.ಜಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ರಾಜಬೀದಿಗಳಲ್ಲಿ ಹೆಜ್ಜೆ ಹಾಕಲಿದಾನೆ. ಈ ಐತಿಹಾಸಿಕ ಕ್ಷಣವನ್ನು ದೇಶ-ವಿದೇಶ ಮತ್ತು ನೆರೆಹೊರೆಯ ಜಿಲ್ಲೆಯ ಲಕ್ಷಾಂತರ ಮಂದಿ ಕಣ್ತುಂಬಿಕೊಳ್ಳಲು ರಾಜ ಬೀದಿಗಳಲ್ಲಿ ಕಿಕ್ಕಿರಿದು ಸೇರಿದ್ದಾರೆ.

ಈ ಜಂಬೂಸವಾರಿ ವೀಕ್ಷಣೆಗೆ ಅರಮನೆಯ ಆವರಣದಲ್ಲಿ 40 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ. ಆದರೂ ಅರಮನೆಯ ಬಳಿಕ ಚಿಕ್ಕ ಗಡಿಯಾರ, ಕೆ.ಆರ್‌.ಆಸ್ಪತ್ರೆ ಹಾಗೂ ಬನ್ನಿಮಂಟಪದ ರಸ್ತೆಗಳಲ್ಲಿ ಜನ ದಟ್ಟಣೆ ಹೆಚ್ಚಾಗಿದೆ.

ಅಷ್ಟೇ ಅಲ್ಲದೇ ಜಂಬೂಸವಾರಿ ಸಾಗುವ ಸಮಯದಲ್ಲಿ ಸಾರ್ವಜನಿಕರು ಡಾ.ರಾಜ್‌ಕುಮಾರ್‌ ಪಾರ್ಕ್‌ನ ಮರಗಳ ಮೇಲೆ ಹಾಗೂ ಕಟ್ಟಡಗಳ ಮೇಲೆ ನಿಂತು ವೀಕ್ಷಿಸುವ ಕಾತುರದಲ್ಲಿ ಕಾಯುತ್ತಿದ್ದಾರೆ.

ಇನ್ನು ಮೈಸೂರಿನಲ್ಲಿ ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಜಿಟಿ ಜಿಟಿ ಮಳೆ ಶುರುವಾಗಿದೆ. ಆದರೂ ಮಳೆಯ ನಡುವೆಯೂ ಜನತೆ ಜಂಬೂಸವಾರಿ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ರಸ್ತೆಗಳಲ್ಲಿ ಕಿಕ್ಕಿರಿದು ಸೇರಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

35 mins ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

51 mins ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

58 mins ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

1 hour ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

2 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

2 hours ago