ನಮ್ಮ ಮೈಸೂರ ದಸರಾ 2024

ಪೊಲೀಸ್ ವಾದ್ಯಮೇಳ: ಅರಮನೆ ಆವರಣದಲ್ಲಿ ಜಮಾಯಿಸಿದ ಸಹಸ್ರಾರು ಜನ

ಮೈಸೂರು : ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಮಂಗಳವಾರ ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಅರಮನೆ‌ ಆವರಣದಲ್ಲಿ ಆಯೋಜಿಸಲಾಗಿದ್ದ, ಸಮೂಹ ವಾದ್ಯಮೇಳ ವೀಕ್ಷಿಸಲು
ಸಾವಿರಾರು ಜನರ ಜನ ಸಾಗರವೇ ಹರಿದು ಬಂದಿತ್ತು.

ರಾಜ ಕಹಳೆ ಮೊಳಗಿಸುವ ಮೂಲಕ ಗೃಹ ಸಚಿವರಾದ ಜಿ ಪರಮೇಶ್ವರ ಅವರನ್ನು ಕರ್ನಾಟಕ‌ ಪೊಲೀಸ್ ಅವರು ಬರಮಾಡಿಕೊಂಡರು. ಕರ್ನಾಟಕದ ವಿವಿಧ ಜಿಲ್ಲೆಗಳ 400 ಕ್ಕಿಂತಲೂ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ ತಂಡಗಳಿಂದ ಆಕರ್ಷಕ ರೀತಿಯಲ್ಲಿ ವಿವಿಧ ವಿನ್ಯಾಸಗಳ ಸಮೂಹ ವಾದ್ಯಮೇಳವನ್ನು ಪ್ರದರ್ಶಿಸಲಾಯಿತು.

ಕನಕದಾಸರ ಕೀರ್ತನೆಯಾದ ನಮ್ಮಮ್ಮ ಶಾರದೆ ಉಮಾ ಮಹೇಶ್ವರಿ ಎಂಬ ವಾದ್ಯಮೇಳಕ್ಕೆ ಜನರು ಮೂಕ ವಿಸ್ಮಿತರಾದರೆ, ಮಧ್ವಾಚಾರ್ಯರ ಕೃತಿಯಾದ ಪ್ರೇಣಯಾಮೋ ವಾಸುದೇವಂ ವಾದ್ಯಕ್ಕೆ ಜನರು ಮನಸೋತರು. ಸಂತ ತುಳಸಿದಾಸರ ಕೃತಿಯಾದ ಶ್ರೀ ರಾಮಚಂದ್ರ ಕೃಪಾಲು ಭಜಮನ ವಾದ್ಯಗಳನ್ನು ಕರ್ನಾಟಕ ವಾದ್ಯವೃಂದದವರು ಪ್ರಸ್ತುತಿ‌ ಪಡಿಸಿದರು.

ಆಂಗ್ಲ ವಾದ್ಯ ವೃಂದದವರು ಹರ್ಮನ್ ಸ್ಪಾರ್ಕ್ ಅವರ ಲೈಟ್ ಕವಾಲಿ, ಎ ಆರ್ ರೆಹಮಾನ್ ಅವರ ಯಶಸ್ವಿ ಆರು ಗೀತೆಗಳನ್ನು ಒಟ್ಟುಗೂಡಿಸಿ ಬಹು ವಾದ್ಯೋಪಕರಣಗಳನ್ನು ಬಳಸಿ ತಮ್ಮದೇ ಆದ ಶೈಲಿಯ ವಾದ್ಯಮೇಳವನ್ನು ನೆರೆದಿದ್ದಂತಹ ಜನ ಸಾಗರದ ಮುಂದೆ ಪ್ರದರ್ಶಿಸಿದರು.

ಕರ್ನಾಟಕ ವಾದ್ಯವೃಂದ ಮತ್ತು ಆಂಗ್ಲ ವಾದ್ಯವೃಂದದವರು ಡಾ.ಎಲ್ ಸುಬ್ರಹ್ಮಣ್ಯ ಅವರ ಕನ್ವರ್ಜೇಷನ್ ಎಂಬ ಸಂಯೋಜನೆಯ ಜುಗಲ್ ಬಂದಿ ನಡೆಸಿದರು.

ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವ ಸತೀಶ್ ಎಲ್ ಜಾರಕಿಹೊಳಿ, ಸಮಾಜ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್ ಸಿ‌ ಮಹದೇವಪ್ಪ, ಬೆಂಗಳೂರಿನ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರಾದ ಅಲೋಕ್ ಮೋಹನ್, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ. ಎಸ್.ಶ್ರೀವತ್ಸ, ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಪೊಲೀಸ್ ಆಯುಕ್ತರಾದ ಸೀಮಾ‌ ಲಾಟ್ಕರ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

8 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

9 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

10 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

10 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

12 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

13 hours ago